ಬಳ್ಳಾರಿ

ಮದ್ಯದಂಗಡಿ ಸ್ಥಳಾಂತರಿಸಿ: ದೂರು

ಕನ್ನಡಪ್ರಭ ವಾರ್ತೆ, ಹೂವಿನಹಡಗಲಿ ಜು. 23
ಪಟ್ಟಣದ ತೋಟದ ರಸ್ತೆಯ ಇಕ್ಕೆಲಗಳಲ್ಲಿರುವ ಎರಡು ಮದ್ಯದಂಗಡಿಗಳ ಬೇರೆಡೆಗೆ ಸ್ಥಳಾಂತರಿಸಬೇಕೆಂದು ವೀರಶೈವ ನಗರ ಘಟಕ ಆಗ್ರಹಿಸಿ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದೆ.
ಈ ರಸ್ತೆ ನಿತ್ಯ ಜನನಿಬಿಡ ಪ್ರದೇಶವಾಗಿದ್ದು, ಸರ್ಕಾರಿ ಶಾಲೆ, ಸಾರ್ವಜನಿಕ ಆಸ್ಪತ್ರೆ, ಹಿರೇಮಲ್ಲಿನಕೆರೆ ಮಠ ಸೇರಿದಂತೆ ಪ್ರಮುಖ ಮಾರುಕಟ್ಟೆ ಪ್ರದೇಶವಾಗಿದೆ. ಇಂತಹ ಪ್ರದೇಶದ ರಸ್ತೆಯ ಇಕ್ಕೆಲಗಳಲ್ಲಿ ಎರಡು ಮದ್ಯದಂಗಡಿಗಳಿಗೆ ಅಬಕಾರಿ ಇಲಾಖೆ ಪರವಾನಗಿ ನೀಡಿದೆ. ಇದರಿಂದಾಗಿ ಹಿರೇಮಲ್ಲಿನಕೆರೆ ಮಠ ಹಾಗೂ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಗಳು ಉಂಟಾಗುತ್ತಿದ್ದು, ಈ ಕೂಡಲೇ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದ್ದಾರೆ.
ಇದೇ ತೋಟದ ರಸ್ತೆಯ ಮುಂದೆ ಮಹಿಳೆಯ ಸಾರ್ವಜನಿಕ ಶೌಚಾಲಯವಿದ್ದು, ನಿತ್ಯ ಮಹಿಳೆಯರು ಮದ್ಯದ ಅಮಲಿನಲ್ಲಿರುವ ನಡುವೆ ಹೋಗಬೇಕಾದ ಸ್ಥಿತಿ ಇದೆ. ದೇವಸ್ಥಾನ, ಶಾಲೆ, ಸಾರ್ವಜನಿಕ ಆಸ್ಪತ್ರೆ ಹತ್ತಿರದಲ್ಲೇ ಇರುವ ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ಸಾಕಷ್ಟು ಕಿರಿಕಿರಿ ಉಂಟಾಗುತ್ತಿದೆ. ಮದ್ಯದ ಅಂಗಡಿ ಪಕ್ಕದ ಸಂದಿಯಲ್ಲಿ ಮದ್ಯಪಾನ ಮಾಡಿ ಖಾಲಿ ಬಾಟಲಿಗಳನ್ನು ಹಿರೇಮಲ್ಲನಕೆರೆ ಮಠದ ಮೇಲೆ ಎಸೆದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ಸಮಾಜದ ಅಧ್ಯಕ್ಷ ಸೊಪ್ಪಿನ ಕೊಟ್ರಪ್ಪ, ಮುಖಂಡ ಬಿ. ಸಿದ್ದೇಶ, ರಾಚಜಗೌಡ, ಕೋಡಿಹಳ್ಳಿ ನಾಗರಾಜ, ಉಜರತ್ತಿ ರುದ್ರಪ್ಪ ದೂರಿದ್ದಾರೆ.
ಕಿರಿದಾಗಿರುವ ತೋಟದ ರಸ್ತೆ ಬದಿಯಲ್ಲಿ ಸಾಕಷ್ಟು ಅಂಗಡಿಗಳಿವೆ. ಇದೇ ಮಾರ್ಗದಲ್ಲಿ ಮದ್ಯದಂಗಡಿ ಇರುವುದರಿಂದ ಮದ್ಯದ ಅಮಲಿನಲ್ಲಿರುವ ವ್ಯಕ್ತಿಗಳೇ ತಿರುಗಾಡುತ್ತಿರುವುದರಿಂದ ಸಾರ್ವಜನಿಕರು ಈ ರಸ್ತೆಯಲ್ಲಿ ಓಡಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಕುರಿತು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸಾಕಷ್ಟು ಬಾರಿ ಲಿಖಿತ ದೂರು ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕಾಟಾಚಾರಕ್ಕೆ ವೀಕ್ಷಿಸಿ ಮದ್ಯದ ಅಂಗಡಿ ಮಾಲೀಕರ ಪರವಾಗಿಯೇ ವಕಾಲತ್ತು ವಹಿಸುತ್ತಿದ್ದಾರೆ. ನಿತ್ಯ ಒಂದಲ್ಲ ಒಂದು ಗಲಾಟೆಗಳು ನಡೆಯುತ್ತಿರುವುದರಿಂದ ಇಲ್ಲಿನ ನಿವಾಸಿಗಳು ರೋಸಿ ಹೋಗಿದ್ದಾರೆಂದು ಆರೋಪಿಸಿದ್ದಾರೆ.
ತೋಟದ ರಸ್ತೆಯ ಮದ್ಯದ ಅಂಗಡಿಗಳನ್ನು ಕೂಡಲೇ ಬೇರೆಡೆ ಸ್ಥಳಾಂತರಿಸಿ ಇಲ್ಲಿನ ನಿವಾಸಿಗಳಿಗೆ ನೆಮ್ಮದಿ ಬದುಕು ಸಾಗಿಸಲು ಅವಕಾಶ ಮಾಡಿಕೊಡಬೇಕು. ಅಬಕಾರಿ ಹಾಗೂ ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳು ವಿಳಂಬ ಧೋರಣೆ ತಾಳಿದರೆ ಉಗ್ರ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!