ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಮನೆಗೆ ನುಗ್ಗಿ ಅತ್ಯಾಚಾರ: ಆರೋಪಿ ಬಂಧನ

Lingaraj Badiger
Updated On : 24 Jul 2014, 11:47 am

ಹೊಸಪೇಟೆ: ಯುವತಿ ಮನೆಗೇ ಅಕ್ರಮ ಪ್ರವೇಶ ಮಾಡಿದ ಯುವಕನೊಬ್ಬ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ತಾಲೂಕಿನ ಕಮಲಾಪುರ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.
ಕಮಲಾಪುರದ ನಿವಾಸಿ ಲಂಬೋದರ (23) ಚಿನ್ನದ ಅಂಗಡಿ ಇಟ್ಟುಕೊಂಡಿದ್ದಾನೆ. ಈತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಯುವತಿ ಹಾಗೂ ಆರೋಪಿಯನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆರೋಪಿಯನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬಿ.ಎನ್. ಲಾವಣ್ಯಾ, ಸಿಪಿಐ ರಘುಕುಮಾರ್, ಪಿಎಸ್‌ಐ ಹನುಮಂತಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement