ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಓಬಳೇಶ್ ಆಯ್ಕೆ ಹೈಕಮಾಂಡ್ ನಿರ್ಧಾರ

Mainashree
Updated On : 1 Aug 2014, 10:12 am

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜು. 31
ಬಿಜೆಪಿ ಅಭ್ಯರ್ಥಿ ಓಬಳೇಶ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಹೈಕಮಾಂಡ್ ನಿರ್ದೇಶನದಂತೆಯೇ ಅಭ್ಯರ್ಥಿ ಆಯ್ಕೆ ಘೋಷಣೆಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನೇಮಿರಾಜ್ ನಾಯ್ಕ ತಿಳಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿ ಘೋಷಣೆ ಕುರಿತಾಗಿ ಯಾವುದೇ ಗೊಂದಲ ಭಿನ್ನಾಭಿಪ್ರಾಯ ಇಲ್ಲ. ಎಲ್ಲರ ಮುಖಂಡರ ಅಭಿಪ್ರಾಯದಂತೆ ಸರ್ವಾನುಮತದಿಂದ ಅಭ್ಯರ್ಥಿ ಆಯ್ಕೆ ಮಾಡಲಾಗಿದೆ. ಪಕ್ಷದ ಟಿಕೆಟ್‌ಗಾಗಿ ಹಲವು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಈ ಕುರಿತಾಗಿ ಪಕ್ಷದ ರಾಜ್ಯ ಮುಖಂಡರು, ರಾಜ್ಯ ಸಮಿತಿ ಮತ್ತು ಸಂಸದ ಬಿ. ಶ್ರೀರಾಮುಲು ಅವರು ಚರ್ಚಿಸಿ, ಮುಖಂಡರ ಅಭಿಪ್ರಾಯಗಳನ್ನು ಪಡೆದು, ಓಬಳೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತಿದ್ದು, ಈ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಓಬಳೇಶ್ ಅವರಿಗೆ ಹೆಚ್ಚಿನ ಪರಿಚಯವಿದ್ದು, ಕ್ಷೇತ್ರದಲ್ಲಿ ಗ್ರಾಮೀಣ ಮುಖಂಡರೊಂದಿಗೆ ಹೆಚ್ಚಿನ ಒಟನಾಟ ಇಟ್ಟುಕೊಂಡಿದ್ದಾರೆ. ಅಲ್ಲದೆ ಶ್ರೀರಾಮುಲು ಕುಟುಂಬದ ಸದಸ್ಯರ ಬದಲಾಗಿ ಹೊಸಬರಿಗೆ, ಹೊರಗಿನವರಿಗೆ ಟಿಕೆಟ್ ಕೊಡಬೇಕೆಂಬ ಉದ್ದೇಶದಿಂದಾಗಿಯೇ ಓಬಳೇಶ್ ಅವರಿಗೆ ಟಿಕೆಟ್ ನೀಡಲು ಪಕ್ಷ ನಿರ್ಧರಿಸಿದೆ. ಇದು ಓಬಳೇಶ್ ಅವರ ಗೆಲುವಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಉಪಚುನಾವಣೆಯಲ್ಲಿ ಪ್ರತಿ ಮತಗಟ್ಟೆಗೂ ಓರ್ವ ಹಾಲಿ ಹಾಗೂ ಮಾಜಿ ಶಾಸಕರನ್ನು ನಿಯೋಜಿಸಲಾಗುತ್ತದೆ. ಮಾಜಿ ಸಂಸದ ಸಣ್ಣ ಫಕ್ಕೀರಪ್ಪ, ಮಾಜಿ ಸಂಸದೆ ಜೆ.ಶಾಂತಾ ಸೇರಿದಂತೆ ಎಲ್ಲರೂ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಗುರುಲಿಂಗನಗೌಡ, ಜಿಲ್ಲಾ ಪಂಚಾಯ್ತಿ ಸದಸ್ಯ ಗೋನಾಳ್ ರಾಜಶೇಖರಗೌಡ, ಮುಖಂಡ  ಮುರಾಹರಿಗೌಡ, ಜಿ. ಶಿವಾರೆಡ್ಡಿ, ಅನಿಲ್ ನಾಯ್ಡು, ರಾಮುಡು,  ಸಂಜಯ್ ಸೇರಿದಂತೆ ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement