ಬಳ್ಳಾರಿ

ಮಳೆ-ಗಾಳಿ: ಮರಗಳು ಧರೆಗೆ

ಕನ್ನಡಪ್ರಭ ವಾರ್ತೆ, ಹೂವಿನಹಡಗಲಿ, ಜೂ. 3
ತಾಲೂಕಿನಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆ- ಗಾಳಿಗೆ ಮರಗಳು ಧರೆಗೆ ಉರುಳಿವೆ. ಕೆರೆ ಕಟ್ಟೆಗಳು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಪುರಾತನ ಬೆಟ್ಟದ ಮಲ್ಲೇಶ್ವರ ದೇವಸ್ಥಾನಕ್ಕೆ ಅಪಾರ ಹಾನಿ ಉಂಟಾಗಿದೆ.
ತಾಲೂಕಿನಲ್ಲಿ ಸೋಮವಾರ ರಾತ್ರಿ 48.33 ಮಿ.ಮೀ ಮಳೆಯಾಗಿರುವ ವರದಿಯಾಗಿದ್ದು, ಮಳೆ-ಗಾಳಿಗೆ ನಾಗತಿ ಬಸಾಪುರ ಜಮೀನಿನ ಮಳೆ ನೀರು ಹತ್ತಾರು ಮನೆಗಳಿಗೆ ಏಕಾಏಕಿ ನುಗ್ಗಿದ್ದು, ಮನೆಯಲ್ಲಿನ ದವಸ ಧಾನ್ಯಗಳು, ಬಟ್ಟೆ ಮತ್ತು ಗೃಹೋಪಯೋಗಿ ವಸ್ತುಗಳು ನೀರಿನಲ್ಲಿ ತೇಲಿ ಹೋಗಿದ್ದು, ಸಾಕಷ್ಟು ಹಾನಿ ಉಂಟಾಗಿದೆ.
ತಾಲೂಕಿನ ಬ್ಯಾಲಹುಣ್ಸಿ, ಮಕರಬ್ಬಿ, ಹೊಸಹಳ್ಳಿ, ಅಂಗೂರು, ಕೋಟಿಹಾಳು, ಮಾಗಳ, ಬನ್ನಿಮಟ್ಟಿ ಸೇರಿದಂತೆ ಇತರೆ ಗ್ರಾಮಗಳಲ್ಲಿ ಕೊಯ್ಲಿಗೆ ಬಂದಿದ್ದ ಬತ್ತ ಮಳೆ-ಗಾಳಿಗೆ ನೆಲಕಚ್ಚಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಹಿರೇಹಡಗಲಿ ಹೊಸ ಬಸ್ ನಿಲ್ದಾಣ ಹಾಗೂ ಕೆಇಬಿ ಗ್ರೀಡ್ ಬಳಿ ಎರಡು ಮರಗಳು ನೆಲಕ್ಕರುಳಿದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಪುರಾತನ ಕಾಲದ ಬೆಟ್ಟದ ಮಲ್ಲೇಶ್ವರ ದೇವಸ್ಥಾನ ಸೇರಿದಂತೆ ಸಮುದಾಯ ಭವನದಲ್ಲಿ ನೀರು ಹಾಗೂ ಗುಡ್ಡದ ಮೇಲಿನ ಮಣ್ಣು ಹರಿದು ದೇವಸ್ಥಾನದ ಬಾಗಿಲು ಮುಚ್ಚಿದೆ. ದೇವಸ್ಥಾನಕ್ಕೆ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಈ ಕುರಿತು ದೇವಸ್ಥಾನ ಆಡಳಿತಾಧಿಕಾರಿ ವಿನಾಯಕ ಗೋಡಬೋಲೆ, ಬೆಟ್ಟದ ಮಲ್ಲೇಶ್ವರ ಗುಡ್ಡದ ಮೇಲೆ ಸುಜಲಾನ್ ಕಂಪನಿ ಫ್ಯಾನ್‌ಗಳನ್ನು ಅಳವಡಿಸಲು ಗುಡ್ಡವನ್ನು ಕಿತ್ತು ಹಾಕಿ ರಸ್ತೆ ಮಾಡಿರುವ ಪರಿಣಾಮ ಮಳೆ ನೀರಿಗೆ ಮೇಲಿಂದ ಅಪಾರ ಪ್ರಮಾಣದಲ್ಲಿ ಮಣ್ಣು, ಕಲ್ಲು ನೀರು ಹರಿದು ಬಂದು ದೇವಸ್ಥಾನಕ್ಕೆ ಹಾನಿ ಉಂಟಾಗಿದೆ ಎಂದರು.
ಈ ಕುರಿತು ಸುಜಲಾನ್ ಕಂಪನಿ ಎಂಜಿನಿಯರ್ ಜತೆಗೆ ಮಾತನಾಡಿ, ಸಿಬ್ಬಂದಿ ಕರೆ ತಂದು ಸ್ವಚ್ಛಗೊಳಿಸುವ ಹಾಗೂ ದೇವಸ್ಥಾನಕ್ಕೆ ಆಗಿರುವ ಹಾನಿಯನ್ನು ಮರು ನಿರ್ಮಾಣ ಮಾಡಬೇಕೆಂದು ತಿಳಿಸಲಾಗಿದೆ ಎಂದರು.  ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರನಾಯ್ಕ, ಜಿಲ್ಲಾಧಿಕಾರಿಗಳು ಸುಜಲಾನ್ ಕಂಪನಿ ಅಧಿಕಾರಿಗಳ ಸಭೆ ಕರೆದು ಶಾಶ್ವತ ಪರಿಹಾರ ಕಂಡುಕೊಂಡು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ