ಕೂಡ್ಲಿಗಿ ತಾಲೂಕಿಗೆ ಸಚಿವ ಆಂಜನೇಯ ಭೇಟಿ
ಕೂಡ್ಲಿಗಿ: ತಾಲೂಕಿನ ಎಂ.ಬಿ. ಅಯ್ಯನಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ವಸತಿ ನಿಲಯಕ್ಕೆ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಶುಕ್ರವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಚಿವ ಆಂಜನೇಯ, ವಸತಿ ನಿಲಯದಲ್ಲಿರುವರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅಲ್ಲದೇ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದ ಸಚಿವರು, ವಸತಿ ನಿಲಯಗಳಲ್ಲಿ ಸ್ವಚ್ಛತೆ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಸದಾ ಎಚ್ಚರಿಕೆಯಿಂದಿರಬೇಕು. ಅಧಿಕಾರಿಗಳು ಬೇಜವಾಬ್ದಾರಿ ವಹಿಸಿದರೆ ತಕ್ಷಣವೇ ಕ್ರಮಕೈಗೊಳ್ಳಲಾಗುವುದೆಂದು ಎಚ್ಚರಿಸಿದರು. ನಂತರ ಅಡುಗೆ ಕೋಣೆ, ದಾಸ್ತಾನು ಕೋಣೆಗಳ ಪರಿಶೀಲನೆ ನಡೆಸಿದರು. ಪರಿಶಿಷ್ಟ ವರ್ಗಗಳ ಜಿಲ್ಲಾ ಅಧಿಕಾರಿ ಸಿ. ಪೋಲಯ್ಯ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಾಜಪ್ಪ, ತಾಲೂಕು ಅಧಿಕಾರಿ ಎಂ.ಎಲ್.ಎನ್. ಮೂರ್ತಿ, ವಸತಿ ನಿಲಯ ಮೇಲ್ವಿಚಾರಕ ಸುಬ್ಬರಾಯ ಇತರರಿದ್ದರು.