ಕ್ಷೌರದ ಅಂಗಡಿಯಲ್ಲಿ ದಲಿತರಿಗೆ ನಿಷೇಧ: ಖಂಡನೆ
ಬಳ್ಳಾರಿ: ಗಂಗಾವತಿ ತಾಲೂಕಿನ ಮರುಕುಂಬಿ ದಲಿತರಿಗೆ ಕ್ಷೌರದ ಅಂಗಡಿಗೆ ನಿಷೇಧ ಹೇರಿರುವುದನ್ನು ಜಿಲ್ಲಾ ಅಂಬೇಡ್ಕರ್ ಸಂಘದ ಜಿಲ್ಲಾಧ್ಯಕ್ಷ ಎರಕುಲ ಸ್ವಾಮಿ ಖಂಡಿಸಿದ್ದಾರೆ. ಈ ಕುರಿತಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಾಮದಲ್ಲಿ 40 ದಲಿತ ಕುಟುಂಬಗಳಿದ್ದು, ಕ್ಷೌರಕ್ಕೆ ನಿಷೇಧಿಸಲಾಗಿದೆ. ಹೀಗಾಗಿ ಗಂಗಾವತಿಗೆ ತೆರಳಿ ಕ್ಷೌರ ಮಾಡಿಸಿಕೊಳ್ಳಬೇಕಾಗಿದೆ. ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ. ಸವರ್ಣೀಯರು ದಲಿತರನ್ನು ಶೋಷಣೆ ಮಾಡುತ್ತಿದ್ದರೂ, ಅಂತಹವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುವಲ್ಲಿ ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಸರ್ಕಾರ ಈ ಸಂಬಂಧ ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಳ್ಳಬೇಕು. ದಲಿತರಿಗೆ ಕ್ಷೌರಕ್ಕೆ ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.