17ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ
ಬಳ್ಳಾರಿ: ಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿಯಾಗಿ ಮಾ.17ರಂದು ಬೆಳಗ್ಗೆ 11.30ಗಂಟೆಗೆ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ 2014ನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದು, ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಪ್ರಕಾಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಸಲಾವುದ್ದೀನ್, ಅಪರ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಮಹಿಳಾ ಸದಸ್ಯ ಮೇರಿ ಹವಿಲಾ ಆಗಮಿಸಲಿದ್ದಾರೆ. ವಕೀಲರ ಅಂಕಲಯ್ಯ ಉಪನ್ಯಾಸ ನೀಡಲಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
--