ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಸುಭದ್ರ ಸರ್ಕಾರಕ್ಕೆ ಕೈ ಬೆಂಬಲಿಸಿ: ದೀಪಕ್ ಸಿಂಗ್

Lingaraj Badiger
Updated On : 14 Mar 2014, 11:27 am

ಹೊಸಪೇಟೆ: ಯುಪಿಎ ಸರ್ಕಾರ ಮಾತ್ರ ದೇಶಕ್ಕೆ ಸುಭದ್ರ ಮತ್ತು ಉತ್ತಮ ಸರ್ಕಾರ ನೀಡಲು ಸಾಧ್ಯ. ದೇಶದ ಜನರು ಯುಪಿಎ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದೀಪಕ್‌ಕುಮಾರ್ ಸಿಂಗ್ ಹೇಳಿದರು.
ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಭಾರತ ನಿರ್ಮಾಣ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಉತ್ತಮ ಆಡಳಿತ ನೀಡಿರುವ ಬಗ್ಗೆ ದೇಶದ ಜನರಿಗೆ ತಿಳಿದಿದೆ. ಹತ್ತು ವರ್ಷಗಳಿಂದ ಸತತವಾಗಿ ದೇಶದಲ್ಲಿ ಯುಪಿಎ ಸರ್ಕಾರ ಜನಪರ ಮತ್ತು ಉತ್ತಮ ಆಡಳಿತ, ಸಾಧನೆಗಳನ್ನು ಹಾಗೂ ರಾಜ್ಯ ಸರ್ಕಾರದ ಜನಪ್ರಿಯ ಮತ್ತು ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ವಿಷಯವನ್ನು ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ಮುಟ್ಟಿಸುವ ಕಾರ್ಯ ಮಾಡಬೇಕು. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸುವ ಮೂಲಕ ಪ್ರಚಾರ ಕೈಗೊಳ್ಳಲಾಗುತ್ತಿದೆ ಎಂದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಅಭಿಲಾಷ್ ಮಾತನಾಡಿ, ಜಿಲ್ಲೆಯಲ್ಲಿ ಯುವ ಕಾಂಗ್ರೆಸ್‌ನಿಂದ 70 ಸಾವಿರ ಸದಸ್ಯತ್ವ ನೋಂದಣಿ ಮಾಡಿಸಿದ್ದು, ವಿಜಯನಗರ ವಿಧಾನಸಭೆ ಕ್ಷೇತ್ರದಲ್ಲಿ 5 ಸಾವಿರ ಸದಸ್ಯತ್ವ ನೋಂದಾಯಿಸಲಾಗಿದೆ. 8 ವಿಧಾನಸಭೆ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್ ಪಾದಯಾತ್ರೆ ನಡೆಸಿ, ಯುವ ಭಾರತ ನಿರ್ಮಾಣ ಯಾತ್ರೆ ನಡೆಸಲಾಗುವುದು ಎಂದು ಹೇಳಿದರು.
ಯುವ ಕಾಂಗ್ರೆಸ್‌ನ ತಾಲೂಕು ಅಧ್ಯಕ್ಷ ಲಿಯಾಕತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಾರಿಹಳ್ಳಿ ಶಿವಮೂರ್ತಿ, ಡಾ.ಬಿ.ಆರ್. ಅಂಬೇಡ್ಕರ್ ಸಂಘದ ತಾಲೂಕು ಅಧ್ಯಕ್ಷ ಎಂ.ಸಿ. ವೀರಸ್ವಾಮಿ, ಕಾಂಗ್ರೆಸ್ ಮುಖಂಡರಾದ ತಾರಿಹಳ್ಳಿ ಜಂಬಯ್ಯ, ಹುಸೇನ್ ತಂಬ್ರಹಳ್ಳಿ, ಬಿ.ಕೆ. ಅನಂತ್, ಮರಿದಾಸ್, ಜೆ.ಡಿ. ಮಂಜುನಾಥ, ಜಲೀಲ್, ಸಾಧಿಕ್, ಈ. ಅಶೋಕ್, ಸಂಜಯ್, ಅಬಿದ್, ನವೀನ್, ಷನಾವತ್ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement