ಹೂವಿನ ಹಡಗಲಿ: ಮತದಾನ ಜಾಗೃತಿ ಜಾಥಾ
ಹೂವಿನಹಡಗಲಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಪ್ರಥಮ ದರ್ಜೆ ಸಹಾಯಕ ರಾಮನಗೌಡ ಶುಕ್ರವಾರ ಚಾಲನೆ ನೀಡಿದರು.
ಏ. 17ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ತಮ್ಮ ಮತದಾನ ಹಕ್ಕನ್ನು ಚಲಾಯಿಸಲು ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸಲು ಜಾಥಾ ಹಮ್ಮಿಕೊಂಡಿದ್ದರು.ಜಾಥಾದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹನುಮಕ್ಕ ಸೇರಿದಂತೆ ಪಟ್ಟಣದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಿದರು. ಸಿಡಿಪಿಒ ಕಚೇರಿ ಪ್ರಥಮ ದರ್ಜೆ ಸಹಾಯಕ ರಾಮನಗೌಡ ಮಾತನಾಡಿ, ನಿರಂತರ ತಾಲೂಕಿನ ಹೋಬಳಿ ಮಟ್ಟ ಮತ್ತು ಹಳ್ಳಿಗಳಲ್ಲಿ ಮತದಾನ ಜಾಗೃತಿ ಜಾಥಾ ನಡೆಸಲಾಗುವುದು. ಹಳ್ಳಿಗಳಲ್ಲಿ ಆಯಾ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರ ಸಹಯೋಗದಲ್ಲಿ ನಡೆಸಲಾಗುವುದು ಎಂದರು.
--