ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಇಸ್ಪೀಟ್ ಅಡ್ಡೆ ಮೇಲೆ ದಾಳಿ: ನಗದು ವಶ

Lingaraj Badiger
Updated On : 19 Mar 2014, 12:26 pm

ಬಳ್ಳಾರಿ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿ, ನಗದು ವಶಪಡಿಸಿಕೊಂಡಿರುವ ಘಟನೆ ಜಿಲ್ಲೆಯ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ ಜರುಗಿದೆ. ಖಚಿತ ಮಾಹಿತಿ ಮೇರೆಗೆ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಗಳಾದ ಶ್ರೀರಂಗ ಸೇರಿದಂತೆ 6 ಜನರನ್ನು ಬಂಧಿಸಿ, ಅವರಿಂದ ರು. 10,040 ಜಪ್ತಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್‌ಗೆ ಲಾರಿ ಡಿಕ್ಕಿ: ಓರ್ವ ಸಾವು
ಬಳ್ಳಾರಿ: ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕಿ ಮೃತಪಟ್ಟ ಘಟನೆ ಸಂಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಹನುಮಪ್ಪ ಎಂಬಾತನೆ ಮೃತವ್ಯಕ್ತಿ. ಪಟ್ಟಣದ ಕುಮಾರಸ್ವಾಮಿ ರಸ್ತೆ ಬಳಿಯ ಎಸ್‌ಎಲ್‌ಆರ್ ಫ್ಯಾಕ್ಟರಿ ಬಳಿ  ಮಲ್ಲಿಕಾರ್ಜುನ ಹಾಗೂ ಹನುಮಪ್ಪ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಹನುಮಪ್ಪ ಮೃತಪಟ್ಟಿದ್ದು, ಇನ್ನಿಬ್ಬರಿಗೆ ಗಾಯಗಳಾಗಿವೆ. ಈ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement