ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ರಂಗಭೂಮಿಯಿಂದ ಉತ್ತಮ ಸಮಾಜ

Rashmi Kasaragodu
Updated On : 26 May 2014, 12:01 pm

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಮೇ 25
ರಂಗಭೂಮಿಯು ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಮತ್ತು ಉತ್ತಮ ಸಮಾಜ ನಿರ್ಮಾಣ ಮಾಡುವ ಮಾಧ್ಯಮವಾಗಿ ಕೆಲಸ ಮಾಡುತ್ತಿದೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಎಸ್. ಭೀಮಾನಾಯ್ಕ ಹೇಳಿದರು.
ತಾಲೂಕಿನ ಮರಿಯಮ್ಮನಹಳ್ಳಿ ದುರ್ಗಾದಾಸ್ ಕಲಾ ಮಂದಿರದಲ್ಲಿ ಶನಿವಾರ ರಾತ್ರಿ ಬೆಂಗಳೂರಿನ  ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಸಹಯೋಗದೊಂದಿಗೆ ಮಹಿಳಾ ವೃತ್ತಿರಂಗ ಕಲಾವಿದರ ಸಂಘ ಹಮ್ಮಿಕೊಂಡಿದ್ದ ಮೂರು ದಿನಗಳ ಮಹಿಳಾ ನಾಟಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶದಲ್ಲಿ ಮಾತ್ರ ಟಿ.ವಿ. ಹಾಗೂ ಸಿನಿಮಾ ಹಾವಳಿಯಿಂದಾಗಿ ರಂಗ ಚಟುವಟಿಕೆ ಕಡಿಮೆಯಾಗುತ್ತಿದ್ದರೂ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ನಡೆಯುತ್ತಿವೆ. ಸರ್ಕಾರ ಪ್ರತಿಯೊಂದು ಗ್ರಾಮದಲ್ಲಿಯೂ ಉತ್ತಮ ರಂಗಮಂದಿರ ನಿರ್ಮಾಣ ಮಾಡಬೇಕು. ರಂಗ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ರಂಗಸಂಸ್ಥೆಗಳಿಗೂ ವರ್ಷಕ್ಕಿಷ್ಟು ಅನುದಾನ ನೀಡಿ ಪ್ರೋತ್ಸಾಹಿಸಬೇಕು ಎಂದು ಅವರು ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ ಅದ್ಭುತ ಕಲಾವಿದರರಿದ್ದಾರೆ. ಅವರ ಕಲೆಯನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕಾಗಿದೆ, ಯಾವುದೇ ಕಲಾವಿದರಿಗೆ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು ಎಂದು ಅವರು ಹೇಳಿದರು.
ದುರ್ಗಾದಾಸ್ ರಂಗ ಮಂದಿರದ ಚಾವಣಿಗೆ ರು. ಹತ್ತು ಲಕ್ಷ ಬಿಡುಗಡೆಯಾಗಿದ್ದು ಕೆಲವೇ ದಿನಗಳಲ್ಲಿ ಭೂಮಿ ಪೂಜೆ ಜೊತೆಗೆ ಕಲಾಮಂದಿರದ ತಡೆಗೋಡೆ ನಿರ್ಮಾಣಕ್ಕೆ ಶಾಸಕರ ಅನುದಾನದಲ್ಲಿ ಸುಮಾರು ರು. 4 ಲಕ್ಷ  ಒದಗಿಸಲಾಗುವುದು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಮಾತನಾಡಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಕುರಿ ಶಿವಮೂರ್ತಿ, ತಾ.ಪಂ. ಸದಸ್ಯರಾದ ಉಪ್ಪಾರ್ ಸೋಮಪ್ಪ, ಎಚ್.ಲಕ್ಷ್ಮಣ, ಆನಂದಮ್ಮ ಮಾರ್ಗದಪ್ಪ, ಲಲಿತ ಕಲಾರಂಗ ಸಂಘದ ಅಧ್ಯಕ್ಷ ಹುರುಕೊಳ್ಳಿ ಮಂಜುನಾಥ, ಮಹಿಳಾ ವೃತ್ತಿ ಕಲಾವಿದರ ಸಂಘದ ಅಧ್ಯಕ್ಷೆ ಡಾ. ಕೆ ನಾಗರತ್ನಮ್ಮ, ರಾಜ್ಯಪ್ರಶಸ್ತಿ ಪುರಸ್ಕೃತೆ ಜಾನಪದ ಕಲಾವಿದೆ ಮಂಜಮ್ಮ ಜೋಗತಿ ಭಾಗವಹಿಸಿದ್ದರು.
ಸಂಗೀತ ನಿರ್ದೇಶಕರಾದ ಸೈಯದ್ ಬಾಷ ಮತ್ತು ಕಿರುತೆರೆ ಹಾಗೂ ಚಲನಚಿತ್ರ ನಟಿ ಮತ್ತು ಜಯಲಕ್ಷ್ಮಿ ಪಾಟೀಲ್, ಹಗರಿಬೊಮ್ಮನಹಳ್ಳಿಯ ಶಾಸಕ ಎಸ್. ಭೀಮಾನಾಯ್ಕ ಮತ್ತು ಸಮಾಜ ಸೇವಕ ಕುರಿ ಶಿವಮೂ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಉಪನ್ಯಾಸಕ ಸೋಮೇಶ್ ಉಪ್ಪಾರ್ ಸ್ವಾಗತಿಸಿ, ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement