ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಶಕ್ತಿಯಾಗಲಿ: ಬೋರಲಿಂಗಯ್ಯ

Mainashree
Updated On : 1 Jun 2014, 10:37 am

ಹೊಸಪೇಟೆ: ಪ್ರಜಾಪ್ರಭುತ್ವದ ಶಕ್ತಿಯಾಗಲು ವಿದ್ಯಾರ್ಥಿಗಳು ತಮ್ಮ ಪಾಲಿನ ಕರ್ತವ್ಯ ನಿಭಾಯಿಸಬೇಕು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಹಿ.ಚಿ. ಬೋರಲಿಂಗಯ್ಯ ಹೇಳಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕ ಏರ್ಪಡಿಸಿದ್ದ ಪಜಾ, ಪಪಂ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಪ್ರೊ. ಎಚ್. ಲಿಂಗಪ್ಪ ಮಾತನಾಡಿದರು. ಸಿಂಡಿಕೇಟ್ ಸದಸ್ಯ ಬಿ. ರಾಮದಾಸ್ ಮಾತನಾಡಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಡಾ. ವಿಜಯ್ ಪೂಣಚ್ಚ ತಂಬಂಡ ಮಾತನಾಡಿದರು. 22 ಎಸ್‌ಸಿ ವಿದ್ಯಾರ್ಥಿಗಳು ಮತ್ತು 15 ಎಸ್‌ಟಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 37 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಹಂಪಿ ವಿವಿಯ ಹಣಕಾಸು ಅಧಿಕಾರಿ ಡಾ. ಪಿ. ಮಹಾದೇವಯ್ಯ, ಸಿಂಡಿಕೇಟ್ ಸದಸ್ಯರಾದ ಸಾಧನಾ ತಂತ್ರಿ, ಸುಭಾಷ್‌ಸಿಂಗ್ ಜಮಾದಾರ್, ಚಕ್ರವರ್ತಿ ಸೂಲಿಬೆಲಿ, ವಿ.ಸಿ. ಸವಡಿ ಸೇರಿದಂತೆ ಇತರರು ಸಭೆಯಲ್ಲಿದ್ದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ಸಂಯೋಜನಾಧಿಕಾರಿಗಳಾದ ಡಾ. ಚಿನ್ನಸ್ವಾಮಿ ಸೋಸಲೆ ಸ್ವಾಗತಿಸಿದರು. ಉಪ ಕುಲಸಚಿವ ಡಾ. ಎ. ವೆಂಕಟೇಶ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement