ಬೀದರ್

ಪತ್ರಕರ್ತರ ಮೇಲಿನ ಹಲ್ಲೆಗೆ ಖಂಡನೆ

ಬಸವಕಲ್ಯಾಣ: ಉಡುಪಿ ಜಿಲ್ಲೆಯ ಪತ್ರಕರ್ತ ಶ್ರೀಪತಿ ಹೆಗಡೆ ಅವರ ಮೇಲೆ ಕೆಲವು ದುಷ್ಕರ್ಮಿಗಳು ನಡೆಸಿರುವ ಹಲ್ಲೆಯನ್ನು ಖಂಡಿಸಿ ಇಲ್ಲಿನ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪದಾಧಿಕಾರಿಗಳು ಘಟನೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಪತ್ರಿಕಾ ಸ್ವಾತಂತ್ರ್ಯದ ಮೇಲೆ ನಡೆಸುತ್ತಿರುವ ದಬ್ಬಾಳಿಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಪ್ರಜಾಪ್ರಭುತ್ವದ ಯಶಸ್ಸಿಗೆ ಪತ್ರಿಕಾರಂಗ ಕೆಲಸ ಮಾಡುತ್ತಿದ್ದರೂ ಮೇಲಿಂದ ಮೇಲೆ ಪತ್ರಕರ್ತರ ಮೇಲಿನ ಹಲ್ಲೆ ಹತ್ತಿಕ್ಕಲಾಗುತ್ತಿಲ್ಲ ಎಂದು ದೂರಿದ್ದಾರೆ.
  ಮಹತ್ವಪೂರ್ಣ ಪತ್ರಿಕಾ ರಂಗದ ಯಶಸ್ಸಿಗೆ ಪತ್ರಕರ್ತರ ಕೊಡುಗೆ ಅಪಾರವಾಗಿದೆ. ಪತ್ರಿಕಾ ರಂಗದ ಮೇಲೆ ಅವಲಂಬನೆಯಾಗಿರುವ ಸಮಾಜದ ಒಳಿತಿಗಾಗಿ ಪತ್ರಕರ್ತರ ರಕ್ಷಣೆ ಅವಶ್ಯವಾಗಿದ್ದು, ಹಲ್ಲೆ ನಡೆಸಿರುವುದು ಖಂಡಾನಾರ್ಹ ಎಂದು ತಿಳಿಸಿದ್ದಾರೆ.
  ನಿರಂತರ ಪತ್ರಕರ್ತರ ಮೇಲೆ ಆಗುತ್ತಿರುವ ಹಲ್ಲೆ ವಿಷಾದಕರ. ತಕ್ಷಣವೇ ಹಲ್ಲೆ ನಡೆಸಿರುವ ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
  ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಶಿವಪುತ್ರ ಪಾಟೀಲ, ಮಾರ್ಥಂಡ ಜೋಷಿ, ಉದಯಕುಮಾರ ಮುಳೆ, ಶಾಂತಕುಮಾರ ವರವಟ್ಟೆ, ಡಿ.ಕೆ. ಪ್ರಹ್ಲಾದ, ನೈಮೊದ್ದೀನ್ ಚಾಬೂಕಸವಾರ್, ಗುರುನಾಥ ಗಡ್ಡೆ ಸೇರಿದಂತೆ ಮುಂತಾದ ಪತ್ರಕರ್ತರು ಉಪಸ್ಥಿತರಿದ್ದರು.
---
ಅಭಿವೃದ್ಧಿಗೆ ಸಾಥ್: ಸಿಇಒಗೆ ಎನ್‌ಜಿಒ ಒಕ್ಕೂಟ ಭೇಟಿ
ಬೀದರ್: ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಜ್ವಲಕುಮಾರ ಅವರಿಗೆ ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಪ್ರಮುಖರು ಸೋಮವಾರ ಭೇಟಿ ಮಾಡಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಸ್ವಯಂ ಸೇವಾ ಸಂಸ್ಥೆಗಳಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕೆಂದು ಮನವಿ ಮಾಡಿದ್ದಾರೆ.
  ಈ ಸಂದರ್ಭದಲ್ಲಿ ಮಾತನಾಡಿದ ಸಿಇಒ ಉಜ್ವಲಕುಮಾರ್, ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಳ್ಳುವುದಾಗಿ ಒಕ್ಕೂಟದ ಪ್ರಮುಖರಿಗೆ ಭರವಸೆ ನೀಡಿದ್ದಾರೆ ಎಂದು ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.
  ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಸುರೇಶ ಪಾಟೀಲ್ ಯಾಕತಪೂರ್, ಕಾರ್ಯಕಾರಿ ಸಮಿತಿ ಸದಸ್ಯ ಎಂಡಿ ಶಫಿಯೊದ್ದೀನ್, ಎಂಎಸ್ ಶಿರೋಮಣಿ, ಬಾಬು ಸಂಗ್ರಾಮ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್