ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೀದರ್

ಪೌಷ್ಟಿಕಾಂಶ ಕೊರತೆಯಿಂದ ಮನುಷ್ಯ ದುರ್ಬಲ

Parashurama
Updated On : 10 Feb 2013, 10:54 am

ಬೀದರ್: ಮನುಷ್ಯ ಪೌಷ್ಟಿಕಾಂಶಗಳ ಕೊರತೆಯಿಂದಾಗಿ ದುರ್ಬಲನಾಗುತ್ತಾನೆ. ಇದರಿಂದ ಅನೇಕ ರೋಗಗಳು ಬರುವ ಸಂಭವ ಉಂಟು. ಆದ್ದರಿಂದ ಪೌಷ್ಟಿಕಾಂಶವುಳ್ಳ ಆಹಾರ ಸೇವನೆ ಮಾಡಿ ಸದೃಢರಾಗಿರುವುದು ಅಗತ್ಯ ಎಂದು ಬಿವಿಬಿ ಪಪೂ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಎಸ್. ಪಾಟೀಲ್ ತಿಳಿಸಿದರು.
  ಜಿಲ್ಲಾ ವಾರ್ತಾ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬಿವಿಬಿ ಪದವಿ ಪೂರ್ವ ಕಾಲೇಜಗಳ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡ ಅಪೌಷ್ಟಿಕತೆ ನಿವಾರಣೆ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿ, ಅಪೌಷ್ಟಿಕಾಂಶದ ಕೊರತೆ ಬರಲಾರದಂತೆ ಎಲ್ಲರೂ ಪ್ರಯತ್ನಿಸಿ ಸ್ವಸ್ಥರಾಗಬೇಕೆಂದರು.
ಸಮತೋಲನ ಆಹಾರ ಸೇವಿಸಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅನೀಲಕುಮಾರ ಚಿಂತಾಮಣಿ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿರುವ 0-6 ವರ್ಷದೊಳಗಿನ ಮಕ್ಕಳಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ರುಚಿಕರ ಆಹಾರ ಸೇವನೆಯಿಂದ ಪೌಷ್ಟಿಕಾಂಶ ದೊರೆಯುವುದಿಲ್ಲ, ಬದಲಾಗಿ ಸಮತೋಲನ ಆಹಾರ ಸೇವನೆ ಅಗತ್ಯವೆಂದು ಅಭಿಪ್ರಾಯಪಟ್ಟರು.
  ಅಧ್ಯಕ್ಷತೆ ವಹಿಸಿದ ಬಿವಿಬಿ ಕಾಲೇಜು ಉಪ ಪ್ರಾಂಶುಪಾಲ ಪ್ರೊ. ಎಂ.ಬಸವರಾಜ ಮಾತನಾಡಿ, 0-6 ವಯೋವುತಿಯುಳ್ಳ ಮಕ್ಕಳಿಗೆ ಪೌಷ್ಟಿಕಾಂಶವಳ್ಳ ಆಹಾರ ಅಗತ್ಯವಿದೆ. ಪಾಲಕರು ತಮ್ಮ ಮಕ್ಕಳ ಭವಿಷ್ಯದ ಕಡೆ ಹೆಚ್ಚು ಕಾಳಜಿ ವಹಿಸುವುದು ಅಗತ್ಯವೆಂದರು.
2 ತಿಂಗಳಿಗೊಮ್ಮೆ ಮಕ್ಕಳ ಆರೋಗ್ಯ ತಪಾಸಣೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಾಧಿಕಾರಿ ಶ್ರೀಕಾಂತ ಕುಲ್ಕರ್ಣಿ ಮಾತನಾಡಿ, 0-6 ವಯೋವುತಿಯ ಮಕ್ಕಳಲ್ಲಿ ಶೇ.50ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ. 2 ತಿಂಗಳಿಗೊಂದು ಬಾರಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಸುಭಾಸ ಮುಧಾಳೆ, ಗರ್ಭಿಣಿ ಮಹಿಳೆಯರ ಹಾಗೂ 0-6 ವಯೋವುತಿಯಲ್ಲಿರುವ ಮಕ್ಕಳಲ್ಲಿ ಅಪೌಷ್ಟಿಕತೆ ಕೊರತೆ ಇದೆ. ಅದಕ್ಕಾಗಿ  ತರಕಾರಿ, ಹಸಿರು ಪಲ್ಯ ಸೇವಿಸುವುದು ಅಗತ್ಯ ಎಂದು ತಿಳಿಸಿದರು. ಅಲ್ಲದೇ ದುರ್ವ್ಯಸನಗಳನ್ನು ಬಿಡುವಂತೆ ಮನವಿ ಮಾಡಿದರು.
  ವಾರ್ತಾ ಸಹಾಯಕರಾದ ಬಕ್ಕಪ್ಪ ಮೆಲ್ಕೇರಿ ಪ್ರಾಸ್ತಾವಿಕ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಮಾಧ್ಯಮಗಳ ಮುಖಾಂತರ, ಜಾನಪದ ಹಾಡುಗಳ ಮೂಲಕ, ಬೀದಿ ನಾಟಕ, ಚಲನಚಿತ್ರ ಹಾಗೂ ವಸ್ತು ಪ್ರದರ್ಶನಗಳು ಪ್ರದರ್ಶಿಸುವ ಮುಖಾಂತರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಅದರ ಸದುಪಯೋಗ ಪಡೆಯುವಂತೆ ಮನವಿ ಮಾಡಿದರು. ಮೀರಾ ಖೇಣಿ ಸ್ವಾಗತಿಸಿದರು. ಬಕ್ಕಪ ಮೆಲ್ಕೇರಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments