ಬೀದರ್: ಭಾರತ ಸಂಸ್ಕೃತಿ ಪ್ರತಿಷ್ಠಾನದಿಂದ ನಗರದ ಮಂಗಲಪೇಟ್ ಮಡಿವಾಳೇಶ್ವರ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆಸಲಾದ ರಾಮಾಯಣ ಪರೀಕ್ಷೆಯಲ್ಲಿ ಮಡಿವಾಳೇಶ್ವರ ಶಾಲೆಯ ವಿದ್ಯಾರ್ಥಿ ಜಿಲ್ಲೆಯ ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕ ಪಡೆದಿದ್ದಾನೆ ಎಂದು ಮುಖ್ಯ ಗುರುಗಳು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಮಡಿವಾಳೇಶ್ವರ ಪ್ರೌಢಶಾಲೆಯ ಒಟ್ಟು 36 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಅದರಲ್ಲಿ ಗುರುನಾಥ ಎಂಬ 9ನೇ ತರಗತಿ ವಿದ್ಯಾರ್ಥಿ ಶೇ.93 ಅಂಕಗಳನ್ನು ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಸರಸ್ವತಿ ಶಿಕ್ಷಣ ವಿಕಾಸ ಸಮಿತಿಯ ಅಧ್ಯಕ್ಷ ಮುಖೇಡಕರ್ ಸೇರಿದಂತೆ ಆಡಳಿತ ಮಂಡಳಿ, ಶಾಲಾ ಸಿಬ್ಬಂದಿ ಹರ್ಷವ್ಯಕ್ತಪಡಿಸಿದ್ದಾರೆ.