ಚಿಟಗುಪ್ಪ ತಾಲೂಕು ಘೋಷಣೆ: ಸಿಎಂಗೆ ಸನ್ಮಾನ
ಹುಮನಾಬಾದ್: ತಾಲೂಕಿನ ಚಿಟಗುಪ್ಪ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಿರುವುದು ಆ ಭಾಗದ ಜನರ ಹಲವು ವರ್ಷಗಳ ಆಶೆ ಇಡೇರಿಸದಂತಾಗಿದ್ದು, ಅಲ್ಲಿನ ಸಾರ್ವಜನಿಕರ ಪರವಾಗಿ ಅಭಿನಂದಿಸುವುದಾಗಿ ಹಿರಿಯ ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ್ ಹುಮನಾಬಾದ್ ತಿಳಿಸಿದರು.
ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಭೇಟಿಯಾಗಿ ಈ ಭಾಗದ ಜನರ ಸಮಸ್ಯೆಗೆ ಸ್ಪಂದಿಸಲಾಗಿದ್ದು, ಚಿಟಗುಪ್ಪಾಕ್ಕೆ ಆದ್ಯತೆ ನೀಡಲಾಗಿದೆ ಎಂದರು.
ಬೀದರ್ ಜಿಲ್ಲೆಯಲ್ಲಿಯೆ ದೊಡ್ಡ ಪಟ್ಟಣವಾಗಿ ಹೊರ ಹೊಮ್ಮಿ ಪುರಸಭೆ ಸೇರಿದಂತೆ ಮತ್ತಿತರರ ಸೌಲಭ್ಯಗಳು ಹೊಂದಿದ್ದು, ಅಲ್ಲಿನ ಜನರ ಪಕ್ಷ ಭೇದ ಮರೆತು ಹೋರಾಟ ಮಾಡಿದ್ದಾರೆ. ಈಗಾಗಲೇ 2-3 ತಿಂಗಳಿಂದ ಸತತವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ಈ ವಿಷಯವನ್ನು ತರಲಾಗುತ್ತಿತ್ತು. ನಮ್ಮ ಮನವಿಗೆ ಆದತ್ಯೆ ನೀಡಿ ಹಿಂದುಳಿದ ಜಿಲ್ಲೆಯ ಅಭಿವೃದ್ಧಿಗೆ ಸಿಎಂ ಸಹಕರಿಸಿದ್ದಾರೆ ಎಂದರು.
ಶಾಸಕ ರಾಜಶೇಖರ ಪಾಟೀಲ್ ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿ, 2004ರಲ್ಲಿ ಶಾಸಕನಾಗಿದ್ದ ಸಂದರ್ಭದಲ್ಲಿ ವಿಶೇಷ ತಹಸೀಲ್ದಾರ್ ನೇಮಕ ಮಾಡಲಾಗಿತ್ತು. ಪಟ್ಟಣವು ಭೌಗೊಳಿಕ ಹಿನ್ನಲೆ ಹೊಂದಿದ್ದು, ಹಲವು ಕಚೇರಿಗಳನ್ನು ಪ್ರಾರಂಭಿಸಲು ಸ್ಥಳಾವಕಾಶ ಒದಗಿಸಿ ಕೊಡಲಾಗುವುದು. ವಿವಿಧ ಸೌಲಭ್ಯಗಳು ಒದಗಿಸಲು ತಕ್ಷಣ ಅನುದಾನ ಬಿಡುಗಡೆ ಮಾಡಬೇಕೆಂದು ಮನವರಿಕೆ ಮಾಡಿಕೊಟ್ಟರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.