ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಲಿ
ಕನ್ನಡಪ್ರಭ ವಾರ್ತೆ, ಬೀದರ್, ಮಾ. 9
ಅತ್ಯಾಚಾರವೆಸಗಿದವರಿಗೆ ಸೌದಿ ಅರೇಬಿಯಾದಲ್ಲಿ ಮಾಡುವಂತೆ ಸಾರ್ವಜನಿಕವಾಗಿ ಕಲ್ಲೆಸೆಯಬೇಕು. ಅವರ ಕೈ ಕಡಿದು ನಮ್ಮ ಕೆಚ್ಚನ್ನು ನಾವು ತೀರಿಸಿಕೊಳ್ಳಬೇಕು ಎಂದು ಮಹಿಳಾ ಟಾಸ್ಕ್‌ಫೋರ್ಸ್ ಮಾಜಿ ಅಧ್ಯಕ್ಷೆ ಗುರುಮ್ಮ ಸಿದ್ದಾರೆಡ್ಡಿ ತಿಳಿಸಿದರು.
ಅವರು ಇತ್ತೀಚೆಗೆ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ (ಎಫ್‌ಪಿಎಐ) ಬೀದರ ಶಾಖೆಯಿಂದ ಶಾಖಾ ಕಚೇರಿಯಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಮಹಿಳೆಯರು ಇನ್ನೊಬ್ಬರಿಗೆ ದೌರ್ಜನ್ಯ, ಅತ್ಯಾಚಾರವಾದಾಗ ತಿಳಿದು ಸುಮ್ಮನಿದ್ದರೆ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗಲಿಕ್ಕೆ ನಾವೇ ಕಾರಣರಾಗುತ್ತೇವೆ ಎಂದರು.
ಮಾದರಿಯಾಗಿ: ಎಫ್‌ಪಿಎಐ ಶಾಖೆ ಅಧ್ಯಕ್ಷ ಡಾ. ವಿಜಯಶ್ರೀ ಬಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೆಣ್ಣು ಸಂಸಾರದ ಕಣ್ಣು. ಮಹಿಳೆಯರು ಆದರ್ಶಪ್ರಾಯರಾಗಿ, ಮಾದರಿಯಾಗಿ ಬೆಳೆಯಬೇಕು ಎಂದರು.
ಅತಿಥಿಯಾಗಿದ್ದ ನಿವೃತ್ತ ಉಪನ್ಯಾಸಕ ಯಶೋದಾ ದಾಸಪ್ಪ ಮಾತನಾಡಿ, ಮಹಿಳೆಯರು ತಮ್ಮ ಜೀವನದಲ್ಲಿ ನಾನಾ ಮಹತ್ವದ ಸ್ಥಾನಗಳನ್ನು ಹೊಂದಿದ್ದಾರೆ. ಮಹಿಳೆಯರು ಮನಸ್ಸು ಮಾಡಿದರೆ ಯಾವುದೇ ಗುರಿ ಹಾಗೂ ಸಾಧನೆ ಮಾಡಬಹುದು ಎಂದರು.
ಆರ್ಥಿಕವಾಗಿ ಬೆಳೆಯಿರಿ: ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಆರತಿ ರಘು ಮಾತನಾಡಿ, ಹೆಣ್ಣು-ಗಂಡು ಎಂಬ ಭೇದ-ಭಾವ ಮಾಡದೆ, ಮಹಿಳೆಯರು ಪುರುಷರೊಂದಿಗೆ ಜೊತೆಗೂಡಿ ಪ್ರತಿಯೊಂದು ಕ್ಷೇತ್ರದಲ್ಲಿ ಮುನ್ನುಗ್ಗಬೇಕು ಎಂದರು.
ಸಂಸ್ಥೆಯ ಕಾರ್ಯಕಾರಿಣಿ ಸದಸ್ಯ ಹಣಮಂತಪ್ಪ ಪಾಟೀಲ್ ಮಾತನಾಡಿ, ಮಹಿಳೆಯರು ಒಂದುಗೂಡಿ ಸ್ವಸಹಾಯ ಸಂಘಗಳ ಮೂಲಕ ಆರ್ಥಿಕವಾಗಿ ಬಲಿಷ್ಠರಾಗುತ್ತಿದ್ದಾರೆ. ಇದು ದೊಡ್ಡ ಪ್ರಮಾಣದಲ್ಲಿ ಬೆಳೆಯಬೇಕು ಎಂದರು. ಸಂಸ್ಥೆಯ ಶಾಖಾ ವ್ಯವಸ್ಥಾಪಕ ಶೇಖ್ ಮುಸ್ತಾಖ ಅಲಿ ಸ್ವಾಗತಿಸಿ, ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತನಾಡಿದರು
ಸಂಸ್ಥೆ ವೈದ್ಯಾಧಿಕಾರಿಗಳಾದ ಡಾ. ಸಿಎಸ್. ಮಾಲಿ ಪಾಟೀಲ್, ಸಿಬ್ಬಂದಿ ಹಾಗೂ ಬೀದರ್‌ನ ಸ್ವಸಹಾಯ ಸಂಘದ ಮಹಿಳೆಯರು ಮತ್ತು ಹದಿಹರೆಯದ ಯುವತಿಯರು ಭಾಗವಹಿಸಿದ್ದರು. ವಿನಾಯಕ ಕುಲ್ಕರ್ಣಿ ನಿರೂಪಿಸಿ, ವಂದಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.