ಮಹಿಳೆಯರ, ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ
ಕನ್ನಡಪ್ರಭ ವಾರ್ತೆ, ಬೀದರ್, ಮಾ. 9
ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಕುರಿತು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವುದು ಇಂದಿನ ಅಗತ್ಯವಾಗಿದ್ದು, ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ, ಜನಜಾಗೃತಿ ಜಾಥಾವನ್ನು ಯಶಸ್ವಿಗೊಳಿಸಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಡಾ. ಕೆ. ಭವಾನಿ ತಿಳಿಸಿದರು.
ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಬಸವ ಕಾರ್ಯ ಸಮಿತಿ, ಉಜ್ವಲಾ ಯೋಜನೆಯ ಸಂಯುಕ್ತಾಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಭಾನುವಾರ ಇಲ್ಲಿಯ ಪಾಪನಾಶ ಮಂದಿರದಲ್ಲಿ ಆಯೋಜಿಸಿದ್ದ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ವಿರುದ್ಧ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಬೀದರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಕಾಂತ ಕುಲ್ಕರ್ಣಿ ಮಾತನಾಡಿ, ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯ ಪಾತ್ರ ಮಹತ್ವದ್ದಾಗಿದೆ ಎಂದರು.
ರಾಜ್ಯ ಪ್ರಶಸ್ತಿ ಪುರಸ್ಕೃತೆ ಸುಮನ ಕೊಂಗಳಿ ಮಾತನಾಡಿ, ಮಹಿಳೆಯರು ಅಬಲೆಯರಲ್ಲ, ಸಬಲೆಯರು ಎಂಬುವುದು ಸಾಬೀತು ಮಾಡಿದ್ದಾರೆ ಎಂದರು.ಸಾಮಾಜಿಕ ಕಾರ್ಯಕರ್ತೆ ಕಲಾವತಿ ಹಾಗೂ ಎಐಸಿಸಿ ಸದಸ್ಯೆ ಗುರಮ್ಮ ಸಿದ್ದಾರೆಡ್ಡಿ ಮಾತನಾಡಿದರು. ಬಸವರಾಜ ಪಾಟೀಲ ನಿಟ್ಟೂರ ಸ್ವಾಗತಿಸಿದರೆ ಬಸವರಾಜ ವರವಟ್ಟಿ ನಿರೂಪಿಸಿದರು ಹೇಮಾ ಪಾಟೀಲ್ ನಿಟ್ಟೂರ ವಂದಿಸಿದರು.
ಜಗನ್ನಾಥ ಗಾದಾ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ಅನೇಕ ಸ್ವ-ಸಹಾಯ ಗುಂಪುಗಳ ಮಹಿಳೆಯರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.