ಅಕ್ರಮ ಮದ್ಯ ಮಾರಾಟ ನಿಷೇಧಕ್ಕೆ ಆಗ್ರಹ
ಹುಮನಾಬಾದ್: ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಬೇಕೆಂದು ಒತ್ತಾಯಿಸಿ ಪಟ್ಟಣದಲ್ಲಿ ತಾಲೂಕಿನ ಗಡವಂತಿ ಗ್ರಾಮದ ಮಹಿಳೆಯರು ಶನಿವಾರ ಪ್ರತಿಭಟನೆ ನಡೆಸಿದರು.
ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕೆ.ಎಂ. ಗಜೇಂದ್ರ, ಡಿಎಸ್ಎಸ್ ಜಿಲ್ಲಾ ಸಂಚಾಲಕ ಲಕ್ಷ್ಮಿಪುತ್ರ ಮಾಳಗೆ, ದಶರಥ, ಸಂತೋಷ, ತೇಜಮ್ಮಾ, ಶಂಕರರಾವ್, ಕಮಲಮ್ಮಾ ಮತ್ತಿತರರ ನೇತೃತ್ವದಲ್ಲಿ ಅತಿಥಿ ಗೃಹದಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ರಿಗೆ ನೀಡಲಾಯಿತು.
ಸೂಕ್ತ ಕ್ರಮ ಜರುಗಿಸಿ: ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಂ. ಗಜೇಂದ್ರ ಮಾತನಾಡಿ, ಇಲಾಖೆ ಪರವಾನಗಿ ಇಲ್ಲದೆ ಗ್ರಾಮದ ಬಹುತೇಕ ಕಡೆ ಸಾರಾಯಿ ಮಾರಾಟ ಮಾಡಲಾಗುತ್ತಿದೆ, ಸಾರ್ವಜನಿಕರು ಸಂಚರಿಸುವೆಡೆ ಮಾರಾಟ ಮಾಡುತ್ತಿರುವುದರಿಂದ ಮಹಿಳೆಯರು ಮಕ್ಕಳು ಗ್ರಾಮದಲ್ಲಿ ನಿರ್ಭಯವಾಗಿ ನಡೆದಾಡುವುದು ಕಷ್ಟವಾಗಿದೆ. ತಾಲೂಕು ಆಡಳಿತ ಈ ಕೂಡಲೇ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ವಿವಿಧ ಮುಖಂಡರು ಮಹಿಳೆಯರು ಮಾತನಾಡಿ, ಕಾನೂನುಬಾಹಿರ ಮದ್ಯ ಮಾರಾಟ ಮಾಡಬಾರದೆಂದು ನಿಯಾಮವಳಿ ಇದ್ದರೂ, ಗ್ರಾಮಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ತಾಲೂಕಿನಲ್ಲಿರುವ ಅಬಕಾರಿ ಇಲಾಖೆಯು ಇದ್ದು, ಇಲ್ಲದಂತಾಗಿದೆ. ಇಲಾಖೆ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮಹಾವರ್ಧನ, ಸುರೇಶ, ರಮೇಶ, ಮಹಾನಂದಾ, ಶಂಕರೆಮ್ಮಾ, ರವಿ, ಮಚೇಂದ್ರ, ಸುಂದರ, ಸಂದೀಪ ಮೂಲಗೆ ಸೇರಿದಂತೆ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.