ಬೀದರ್

ಮಾನವೀಯ ಮೌಲ್ಯ ಎತ್ತಿ ಹಿಡಿಯಿರಿ

ಕ.ಪ್ರ. ವಾರ್ತೆ    ಬೀದರ್    ಜು.23
ಇಂದು ಸಮಾಜದಲ್ಲಿ ಕುಸಿಯುತ್ತಿರುವ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸ ವಿದ್ಯಾರ್ಥಿಗಳು ಹಾಗೂ ಯುವಕರು ಮಾಡಬೇಕಾಗಿದೆ ಎಂದು ಡಿಸಿ ಡಾ. ಪಿ.ಸಿ. ಜಾಫರ್ ತಿಳಿಸಿದರು.
  ನಗರದ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಕಸಾಪ ವತಿಯಿಂದ ಕನ್ನಡ ಮಾಧ್ಯಮದ ಪ್ರತಿಭಾವಂತರಿಗೆ ಹಮ್ಮಿಕೊಳ್ಳಲಾದ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ಅನೈತಿಕತೆ, ದೌರ್ಜನ್ಯಗಳು ಹೆಚ್ಚಾಗಿವೆ. ಆದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸುವುದರೊಂದಿಗೆ ಒಳ್ಳೆಯ ಮನುಷ್ಯನಾಗುವುದನ್ನು ಕೂಡ ಕಲಿಯಬೇಕೆಂದರು.
  ಕೇವಲ ಪ್ರಮಾಣ ಪತ್ರಗಳನ್ನು ಪಡೆಯುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದ ಅವರು, ಭವಿಷ್ಯದ ನಾಗರಿಕರಾಗಬೇಕಾದರೆ ಒಳ್ಳೆಯದನ್ನೆ ಮಾಡಬೇಕು ಜಿಲ್ಲೆಯಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗಾಗಿ ಕಳೆದ 1 ವರ್ಷದಿಂದ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಎಲ್ಲ ಭಾಷೆಗಳ ಸಾಮರಸ್ಯ ಜಿಲ್ಲೆ: ಜಿಲ್ಲೆ ಗಡಿಭಾಗದ ಜಿಲ್ಲೆಯಾಗಿದ್ದರಿಂದ ಅನೇಕ ಭಾಷೆಗಳನ್ನಾಡುವವರು ಇದ್ದು, ಇಲ್ಲಿ ಸರಿಸುಮಾರು 5 ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯುವ ಮಕ್ಕಳು ಇದ್ದರು ಕೂಡ ಬೆಳಗಾಂ ಜಿಲ್ಲೆಯಂತೆ ನಮ್ಮಲ್ಲಿ ಭಾಷೆಯ ವಿಷಯದಲ್ಲಿ ಯಾವುದೇ ಗೊಂದಲ ಹಾಗೂ ಸಮಸ್ಯೆಗಳಿಲ್ಲ. ಭಾಷೆಗಳ ಬಾಂಧವ್ಯ ಹಾಗೂ ಎಲ್ಲ ಭಾಷೆಗಳ ಸಾಮರಸ್ಯ ಜಿಲ್ಲೆಯಾಗಿದೆ ಎಂದರು.
  ರಾಜ್ಯದಿಂದ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳು ಎದುರಿಸುವವರ ಸಂಖ್ಯೆ ಕಡಿಮೆಯಾಗಿದೆ. ಆದರೆ ಕೆಲ ವರ್ಷಗಳಿಂದ ರಾಜ್ಯ ಸರ್ಕಾರವು ಈ ಕಡೆ ಹೆಚ್ಚಿನ ಒಲವು ತೋರಿರುವುದರಿಂದ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯುವ ಧೈರ್ಯ ತೋರುತ್ತಿದ್ದಾರೆ ಎಂದರು.
  ಐಎಎಸ್ ಪರೀಕ್ಷೆಯಲ್ಲಿ ರಾಜ್ಯದಿಂದ ವಿಶೇಷವಾಗಿ ಕನ್ನಡ ಭಾಷೆಯಲ್ಲಿ ಉತ್ತಮ ರ್ಯಾಂಕ್ ಪಡೆದವರನ್ನು  ಎಲ್ಲ ಜಿಲ್ಲೆಗಳಲ್ಲಿ ಕರೆಯಿಸಿ ಮಕ್ಕಳಿಗೆ ಪ್ರೋತ್ಸಾಹ ನೀಡುವ ಉದ್ದೇಶ ಹೊಂದಿ ರಾಜ್ಯದ ಇಬ್ಬರು ರ್ಯಾಂಕ್ ಪಡೆದವರನ್ನು ಕರೆಸಲಾಗಿದೆ ಎಂದರು.
ವಿದ್ಯಾರ್ಥಿಗಳಿಗೆ ಪ್ರೋತ್ಸಾಹ: ಮುಖ್ಯ ಅತಿಥಿಯಾಗಿದ್ದ ಶಾಹೀನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಖದೀರ ಮಾತನಾಡಿ, ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಾಗುವುದು ಎಂದರು.
  ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಪ್ರೊ. ಸಿದ್ರಾಮಪ್ಪಾ ಮಾಸಿಮಾಡೆ ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯದಲ್ಲಿ ಸಾಧನೆ ಮಾಡಿದವರಿಗೆ ಪರಿಷತ್ತಿನಿಂದ ಸನ್ಮಾನಿಸಿರುವ ಈ ಕಾರ್ಯಕ್ರಮ ತುಂಬ ಮಹತ್ವದಾಗಿದೆ ಎಂದರು.
  ಈ ಸಂದರ್ಭದಲ್ಲಿ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು 25 ರ್ಯಾಂಕ್ ಪಡೆದ ಗುರುದತ್ತ ಹೆಗಡೆ ಹಾಗೂ 104ನೇ ರ್ಯಾಂಕ್ ಪಡೆದ ಲಕ್ಷ್ಮಣ ನಿಂಬರಗಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಬಸಗೂಂಡೆ ಹಾಜರಿದ್ದರು.
  ಬಾಬುದಾನಿ ಸ್ವಾಗತಿಸಿ, ಸಂಜೀವಕುಮಾರ ಅತಿವಾಳೆ ನಿರೂಪಿಸಿ, ಶಿವಕುಮಾರ ಕಟ್ಟೆ ಐಎಎಸ್ ಉತ್ತೀರ್ಣರಾಗಿ ಸನ್ಮಾನಿತಗೊಂಡವರ ಪರಿಚಯ ಮಾಡಿದರು.
  ಇದೇ ಸಂದರ್ಭದಲ್ಲಿ ಕನ್ನಡ ಮಾಧ್ಯಮದೊಂದಿಗೆ, ಉರ್ದು, ಹಿಂದಿ, ಮರಾಠಿ, ಇಂಗ್ಲೀಷ್ ಮಾಧ್ಯಮದಲ್ಲಿ ಓದಿ ಕನ್ನಡದಲ್ಲಿ ಹೆಚ್ಚು ಅಂಕ ಗಳಿಸಿದ ತಲಾ 3 ವಿದ್ಯಾರ್ಥಿಗಳು ಹಾಗೂ ಕನ್ನಡ ಮಾಧ್ಯಮದ ಸಿಇಟಿಯಲ್ಲಿ ಹೆಚ್ಚು ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪೋಷಕರು ಮತ್ತಿತರರು ಹಾಜರಿದ್ದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!