ಬೀದರ್

ದೌರ್ಜನ್ಯ ಸಹಿಸದಿರಿ

ಹುಮನಾಬಾದ್: ಮಹಿಳೆಯರ ಮೇಲೆ ದೌರ್ಜನ್ಯ ಎಸಗುವುದು ಕಾನೂನಿನ ಅಪರಾಧವಾಗಿದೆ. ದೌರ್ಜನ್ಯ ಎಸಗುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಡಿವೈಎಸ್ಪಿ ಅಮರನಾಥರೆಡ್ಡಿ ತಿಳಿಸಿದರು.
ಪಟ್ಟಣದ ಇಂದಿರಾನಗರ ಬಡಾವಣೆ ಸಮುದಾಯ ಭವನದಲ್ಲಿ ಪೊಲೀಸ್ ಇಲಾಖೆ ಮತ್ತು ದಿಕ್ಸೂಚಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂರಕ್ಷಣೆ ಕುರಿತು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಬದುಕುವ ಹಕ್ಕು ಎಲ್ಲರಿಗೂ ಇದ್ದು, ಪ್ರತಿಯೊಬ್ಬರೂ ಸಮಾನರಾಗಿ ಬಾಳಬೇಕಾಗಿದೆ ಎಂದರು.
ದೌರ್ಜನ್ಯ ಪ್ರಕರಣಗಳು ಕಂಡುಬಂದರೆ ಪೊಲೀಸರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು. ದೂರು ನೀಡಲು ಯಾರೂ ಭಯಪಡಬೇಕಿಲ್ಲ ಎಂದು ಕರೆ ನೀಡಿದರು.
ಸಿಪಿಐ ದತ್ತಾತ್ರೆಯ ಕಾರ್ನಾಡ್ ಮಾತನಾಡಿ, ಅಪಾರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಲಾಖೆಗೆ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಕೈ ಜೋಡಿಸಿದಲ್ಲಿ ಮುಂದೆ ನಡೆಯುವ ಘಟನೆಗೆ ಕಡಿವಾಣಕ್ಕೆ ಸಾಧ್ಯ ಎಂದರು.
ಪುರಸಭೆ ಅಧ್ಯಕ್ಷ ವಿನಾಯಕ ಯಾದವ್, ಸಂಸ್ಥೆಯ ಅಧ್ಯಕ್ಷ ಗೌತಮ್ ಮೇಟಿ, ತಾ. ಸಮಾಜ ಕಲ್ಯಾಣಾಧಿಕಾರಿ ಲಿಂಗರಾಜ ಅರಸ್, ಪುರಸಭೆ ಯೋಜನಾಧಿಕಾರಿ ಮೀನಾಕುಮಾರಿ ಬೋರಾಳಕರ್, ಪಿಎಸ್‌ಐ ಎಲ್.ಬಿ. ಅಗ್ನಿ, ಪ್ರಮುಖರಾದ ಪರಮೇಶ್ವರ ಆರ್ಯ, ಸುರೇಶ ಘಾಂಗ್ರೆ, ಧರ್ಮರಾಯ ಘಾಂಗ್ರೆ ಸೇರಿದಂತೆ ವಿವಿಧ ಸ್ವಸಹಾಯ ಸಂಘದ ಮಹಿಳೆಯರು ಪಾಲ್ಗೊಂಡಿದ್ದರು.
ಜಗನ್ನಾಥ ಸ್ವಾಗತಿಸಿದರು. ಪ್ರೇಮಲತಾ ನಿರೂಪಿಸಿದರು. ಶಶಿಕಲಾ ವಂದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ