ಬೀದರ್

ಅಫ್ರೋಜ್ಗೆ ಬೀಳ್ಕೊಡುಗೆ

ಬೀದರ್: ಒಂದು ಪ್ರತಿಷ್ಠಿತ ಮಹಾವಿದ್ಯಾಲಯದಲ್ಲಿ ಸೇವೆ ಸಲ್ಲಿಸಿದ್ದು, ನನ್ನ ಸೌಭಾಗ್ಯ ಮಹಾವಿದ್ಯಾಲಯದಲ್ಲಿ ಸೇವೆಯ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಅವರ ಏಳಿಗೆಗಾಗಿ ಹಲವಾರು ಮಹತ್ವಪೂರ್ಣ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ನಿವೃತ್ತ ಪ್ರಾಂಶುಪಾಲ ಅಫ್ರೋಜ ಪಾಶಾ ನುಡಿದರು.
ಬಿವಿಬಿ ಮಹಾವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ತನ್ನ ಅವಧಿಯಲ್ಲಿ ಏಳಿಗೆಗಾಗಿ ಸಹಕರಿಸಿದ ಸಂಸ್ಥೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರನ್ನು ಮರೆಯಲಾರೆ ಎಂದರು.
ಇನೊಬ್ಬ ನಿವೃತ್ತ ಉಪ ಪ್ರಾಂಶುಪಾಲ ಪ್ರೊ. ಬಸವರಾಜ ಎಂ. ಮಾತನಾಡಿ,  ನನ್ನ ಸೇವಾ ಅಧಿಯಲ್ಲಿ ನನಗೆ ವಹಿಸಿಕೊಟ್ಟಂತಹ ಕಾರ್ಯಗಳನ್ನು ಶ್ರದ್ಧೆ, ನಿಷ್ಠೆ, ಪ್ರಾಮಾಣಿಕತೆ, ಕರ್ತವ್ಯ ಪ್ರಜ್ಞೆಯಿಂದ ಸಮಯ ಪರಿಪಾಲನೆ ಮಾಡಿ ಆದರ್ಶ ಶಿಕ್ಷಕನಾಗಿ ನಿವೃತ್ತಿ ಹೊಂದಿರುವುದು ಹೆಮ್ಮೆಯ ವಿಷಯ ಎಂದು ಅವರು ನುಡಿದರು.
ಪ್ರಾಂಶುಪಾಲರಾದ ಪ್ರೊ. ಎಸ್.ಆರ್. ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಸನ್ಮಾನಿತರ ಕುರಿತು ಪ್ರೊ. ಸಿ.ವಿ. ಭಾಲ್ಕೆ, ಪ್ರೊ. ಅನಿಲಕುಮಾರ ಅಣದೂರೆ, ಸುಜೀತಕುಮರ ಬಿ. ಮಾತನಾಡಿದರು.
ಡಾ. ಹಣಮಂತಪ್ಪಾ ಬಿ. ಸೇಡಂಕರ ಸ್ವಾಗತಿಸಿದರೆ, ಪ್ರೊ. ಶ್ರೀಕಾಂತರಾವ್ ವಿ.ಬಿರಾದಾರ ನಿರೂಪಿಸಿದರೆ, ಪ್ರೊ. ವಾಮನ್ ರಾವ್ ಕುಲಕರ್ಣಿ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿ.ಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ; ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!