ಬೀದರ್

ಪತ್ರಿಕಾ ದಿನಾಚರಣೆ ಇಂದು

ಬೀದರ್: ನಗರದ ಹೊಸ ಬಸ್ ನಿಲ್ದಾಣ ಎದುರಿನ ಮಯೂರ ಹೋಟೆಲ್ನಲ್ಲಿ ಜು.29ರಂದು ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಸಂಸದ ಭಗವಂತ ಖೂಬಾ ಉದ್ಘಾಟಿಸುವರು. ಸಂಘದ ಜಿಲ್ಲಾಧ್ಯಕ್ಷ ಅಶೋಕಕುಮಾರ ಕರಂಜಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಶಾಸಕರಾದ ರಾಜಶೇಖರ ಪಾಟೀಲ, ಈಶ್ವರ ಖಂಡ್ರೆ, ಮಲ್ಲಿಕಾರ್ಜುನ ಖೂಬಾ, ಅಶೋಕ ಖೇಣಿ, ರಘುನಾಥರಾವ್  ಮಲ್ಕಾಪೂರೆ, ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ, ಜಿ.ಪಂ. ಅಧ್ಯಕ್ಷೆ ನೀಲಮ್ಮಾ ವಡ್ಡೆ, ಡಿಸಿ ಡಾ. ಪಿ.ಸಿ ಜಾಫರ್, ಎಸ್ಪಿ ಸುಧೀರಕುಮಾರ ರೆಡ್ಡಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ
ಬೀದರ್: ನಗರದ ಸಂಜಯ ಡಾನ್ಸ್ ಅಕಾಡೆಮಿಯಿಂದ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಡ್ಯಾನ್ಸ್ ಸ್ಪರ್ಧೆಯನ್ನು ಜು.31ರಂದು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಐಎಂಎ ಹಾಲ್ನಲ್ಲಿ ಡಾನ್ಸ್ ಸೋಲು, ಡಬಲ್ ಗ್ರೂಪ್ಸ್ ಸ್ಪರ್ಧೆಗಳು ನಡೆಯಲಿವೆ. ಈ ಸ್ಪರ್ಧೆಗಳಲ್ಲಿ ರಾಜ್ಯದಲ್ಲಿ ಬರುವ ಎಲ್ಲ ಜಿಲ್ಲೆಗಳ ಎಲ್ಲ ನೃತ್ಯ ತಂಡಗಳು ಭಾಗವಹಿಸಬೇಕೆಂದು ಕೋರಲಾಗಿದೆ. ವಿಜೇತ ತಂಡಗಳಿಗೆ ಪ್ರಥಮ ಪುರಸ್ಕಾರ 10 ಸಾವಿರ, ದ್ವಿತೀಯ ಬಹುಮಾನ 7 ಸಾವಿರ ಮತ್ತು ತೃತೀಯ ಬಹುಮಾನ 5 ಸಾವಿರ ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಜಯ- 9844446687ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಕಿಸಾನ್ ಕ್ರೆಡಿಟ್ ಬ್ಯಾಂಕ್ ಉದ್ಘಾಟನೆ ಆ.4ಕ್ಕೆ
ಬೀದರ್: ಪಟ್ಟಣದ ಕಿಸಾನ್ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ ಕಚೇರಿಯನ್ನು ಆ.4ರಂದು ಚಾಲನೆ ನೀಡಲಾಗುವುದು. ಅಂದು ಬೆಳಗ್ಗೆ 9.30ಕ್ಕೆ ನಗರದ ಬಿವಿಬಿ ಕಾಲೇಜು ರಸ್ತೆಯಲ್ಲಿ ಆರಂಭಿಸಲಾದ ಕಚೇರಿಯನ್ನು ಡಿಸಿಸಿ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ ಶರಣಪ್ಪಾ ಭಕಾಳೆ ಉದ್ಘಾಟಿಸುವರು. ಶ್ರೀಕಾಂತ್ ಬಿರಾದಾರ್ ಅಧ್ಯಕ್ಷತೆ ವಹಿಸುವರು ಎಂದು ಸಹಕಾರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರಣು ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರಾವಣ: ಹನುಮಾನ್ ಮಂದಿರದಲ್ಲಿ ಭಜನೆ
ಬೀದರ್: ಶ್ರಾವಣ ಮಾಸದ ಅಂಗವಾಗಿ ಬೀದರ್ನ ಮಹೇಶ ನಗರದ ಹನುಮಾನ್ ಮಂದಿರದಲ್ಲಿ ಒಂದು ತಿಂಗಳ ಕಾಲ ಭಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತಿ ದಿನ ರಾತ್ರಿ 9ರಿಂದ 10.30ರ ವರೆಗೆ ಭಜನೆ ನಡೆಯುತ್ತಿದ್ದು, ಪ್ರತಿದಿನ ಸರದಿಯಲ್ಲಿ ಭಕ್ತರು ಭಜನೆಯನ್ನು ನಡೆಸಿಕೊಡುತ್ತಿದ್ದಾರೆ.
ಈ ವರ್ಷ ದೇಶದಲ್ಲಿ ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಈ ಭಜನೆ ಹಮ್ಮಿಕೊಳ್ಳಲಾಗಿದೆ. ಭಜನೆ ಮಂಡಳಿ ಅಧ್ಯಕ್ಷ ಶರಣಪ್ಪ ಸಜ್ಜನಶೆಟ್ಟಿ, ಗುರುಲಿಂಗಯ್ಯಾ ಸ್ವಾಮಿ, ಬಿಚ್ಚಪ್ಪಾ ಪಾಟೀಲ, ಶರಣಪ್ಪಾ ಎಲ್ಐಸಿ, ಇಂದುಧರ ಸಿರ್ಸಿ, ರುದ್ರೇಶ ಹಿರೇಮಠ, ಸೋಮನಾಥ ಸಜ್ಜಶೆಟ್ಟಿ, ಪ್ರವೀಣ ಯಾದವ್, ದಿನೇಶ ದಾಮಾ ಮತ್ತಿತರು ಭಾಗವಹಿಸಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾರು ಪಾಲ್ಗೊಳ್ಳುವಂತೆ ಜೈ ಹನುಮಾನ್ ಯುವಕ ಸಂಘ ಮಹೇಶ ನಗರ ವತಿಯಿಂದ ಸಂಘದ ಪ್ರಧಾನ ಕಾರ್ಯದರ್ಶಿ ಸಂಗಮೇಶ ನೇಳಗೆ ಸಂಗಮ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!