ಬೀದರ್

ಸಣ್ಣ ಕಥೆಗಳ ಆಹ್ವಾನ

ಶಹಾಪುರ: ಬೀದರ್: ದಿ. ಜಯತೀರ್ಥ ರಾಜಪುರೋಹಿತ ಸ್ಮಾರಕ ರಾಜ್ಯಮಟ್ಟದ ಕನ್ನಡ ಕಥಾ ಸ್ಪರ್ಧೆಗೆ ಗುಲ್ಬರ್ಗ ವಿಶ್ವವಿದ್ಯಾಲಯವು ಸಣ್ಣ ಕಥೆಗಳನ್ನು ಆಹ್ವಾನಿಸಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಕಥೆಗಾರರು ತಾವು ಬರೆದ ಕಥೆಯ(ನಾಲ್ಕು) ಪ್ರತಿಗಳನ್ನು ಆ.20 ರೊಳಗೆ ನಿರ್ದೇಶಕರು, ಪ್ರಸಾರಾಂಗ, ಗುಲ್ಬರ್ಗ ವಿಶ್ವವಿದ್ಯಾಲಯ, ಗುಲ್ಬರ್ಗ-585 106 ಈ ವಿಳಾಸಕ್ಕೆ ಕಳುಹಿಸಬೇಕು.  ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ ಕಥೆಗೆ ದಿ. ಜಯತೀರ್ಥ ರಾಜಪುರೋಹಿತ ಸ್ಮಾರಕವಾಗಿ 2 ಸಾವಿರ ನಗದು ಹಣ ಮತ್ತು ಒಂದು ಚಿನ್ನದ ಪದಕ ನೀಡಲಾಗುವುದು.  ಕಥೆಯು ಕನ್ನಡ ಭಾಷೆಯಲ್ಲಿರಬೇಕು. ಸ್ವಂತ ಕಥೆಯಾಗಿರಬೇಕು. ಈ ಮೊದಲು ಎಲ್ಲಿಯೂ ಪ್ರಕಟವಾಗಿರಕೂಡದು. ತಮ್ಮ ಕಿರು ಪರಿಚಯ ದೃಢೀಕರಿಸಬೇಕು ಎಂದು ಗುಲ್ಬರ್ಗ ವಿವಿ ಕುಲಸಚಿವರು ತಿಳಿಸಿದ್ದಾರೆ.
ಕನ್ನಡ ಕೃತಿಗಳಿಗೆ ಗೌರವಧನ
ಬೀದರ್: ಗುಲ್ಬರ್ಗ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಹೊಂದಿಕೊಂಡಂತೆ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳ ಕನ್ನಡ ಲೇಖಕರ ಕೃತಿಗೆ ಗೌರವಧನ ನೀಡುವುದಕ್ಕೆ ಗುಲ್ಬರ್ಗ ವಿಶ್ವವಿದ್ಯಾಲಯ ಕೃತಿಗಳನ್ನು ಆಹ್ವಾನಿಸಿದೆ. ಪ್ರತಿ ಕೃತಿಗೆ 5 ಸಾವಿರ ಗೌರವಧನ ಹಾಗೂ ಪ್ರಶಸ್ತಿ ನೀಡಲಾಗುವುದು. ಪುಸ್ತಕದ 4 ಪ್ರತಿಗಳನ್ನು ಆ.20ರೊಳಗೆ ನಿರ್ದೇಶಕರು ಪ್ರಸಾರಾಂಗ, ಗುಲ್ಬರ್ಗ ವಿಶ್ವವಿದ್ಯಾಲಯ, ಗುಲ್ಬರ್ಗ- 585 106 ವಿಳಾಸಕ್ಕೆ ಕಳುಹಿಸಬೇಕು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!

‘ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು'.. 'ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆ

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಜಿಯೋ - ಸ್ಟಾರ್‌ಲಿಂಕ್‌, ಸ್ಟಾರ್ ವಾರ್ ಹಿಂದಿನ ಆರ್ಥಿಕತೆ! (ಹಣಕ್ಲಾಸು)

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡರೆ ಮೀಸಲಾತಿ ಸೌಲಭ್ಯ ಸಿಗಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!