'ಅಡುಗೆ ಅನಿಲ ನಿಯಮಿತವಾಗಿ ವಿತರಿಸಿ'
ಬಿಜಾಪುರ: ನಾಗರಿಕರಿಗೆ ಅಡುಗೆ ಅನಿಲವನ್ನು ನಿಯಮಿತವಾಗಿ ವಿತರಿಸಬೇಕು ಎಂದು ಉತ್ತರ ಕರ್ನಾಟಕ ಕನ್ನಡಸೇನೆಯ ಅಧ್ಯಕ್ಷ ಚಂದ್ರು ಕಲ್ಬುರ್ಗಿ ಅವರು ಆಗ್ರಹಿಸಿದ್ದಾರೆ.
ನಗರದ ಜನತೆಗೆ ಪೂರೈಸುವ ಅಡುಗೆ ಅನಿಲ ಸಿಲಿಂಡರ್ ವಿತರಣೆಯಲ್ಲಿ ವಿಳಂಬವಾಗುತ್ತಿರುವುದರಿಂದ ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಪ್ರತಿ ದಿನ ಸರತಿಯಲ್ಲಿ ಸಾಲು ಗಟ್ಟಿ ನಿಂತರೂ ಜನರಿಗೆ ಸಿಲಿಂಡರ್ ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾಡಳಿತ ಈ ಸಮಸ್ಯೆಯನ್ನು ನಿವಾರಣೆ ಮಾಡಬೇಕು.
ಸರ್ಕಾರ ವಿತರಿಸುತ್ತಿರುವ ಪಡಿತರ ಚೀಟಿಯಲ್ಲಿ ಹಲವು ಲೋಪ ದೋಷಗಳಿದ್ದು, ಅವುಗಳನ್ನು ಸರಿಪಡಿಸಬೇಕು. ಇನ್ನು ಸಮರ್ಪಕವಾಗಿ ಜನರಿಗೆ ಪಡಿತರ ಚೀಟಿ ದೊರೆಯದ ಕಾರಣ ಕಡು ಬಡವರು ಭಾಗ್ಯ ಲಕ್ಷ್ಮಿ ಯೋಜನೆಯಿಂದ ವಂಚಿತಗೊಳ್ಳುತ್ತಿದ್ದಾರೆ. ಕೂಡಲೇ ಹೊಸ ಪಡಿತರ ಚೀಟಿಯ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.