ಇಂದು ಬಿಜಾಪುರಕ್ಕೆ ಗಸ್ತಿ
ಬಿಜಾಪುರ: ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಶೋಕ ಗಸ್ತಿ ಅವರು ಫೆ.14ರಂದು ಬೆಳಗ್ಗೆ 11-30ಕ್ಕೆ ಬೀದರಿನಿಂದ ಬಿಜಾಪುರಕ್ಕೆ ಆಗಮಿಸಲಿದ್ದಾರೆ. ಗಸ್ತಿ ಅವರು ಬಿಸಿಎಂ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪರಿಶೀಲನೆ, ಸಾಲ ವಸೂಲಾತಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ ಬಿಜಾಪುರದಿಂದ ರಾಯಚೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಪಡಿತರ ಚೀಟಿದಾರರ ಪಟ್ಟಿ ಪ್ರಕಟ
ಬಿಜಾಪುರ: ಪಡಿತರ ಚೀಟಿದಾರರ ಪಟ್ಟಿಯನ್ನು ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳ ಕಚೇರಿಗಳಲಿ ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಕಟಿಸಲಾಗಿದೆ. ಪಡಿತರ ಚೀಟಿಗಳ ದತ್ತಾಂಶದಲ್ಲಿರುವ ಅಂಗೀಕೃತ ಪರಿಶೀಲನೆ ಹಂತ, ರದ್ದುಪಡಿಸಿರುವುದು ಮತ್ತು ಅಮಾನತನಲ್ಲಿಟ್ಟಿರುವ ಮಾಹಿತಿಯನ್ನು ನ್ಯಾಯಬೆಲೆ ಅಂಗಡಿವಾರು ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಗ್ರಾಪಂ, ಪಪಂ, ಪುರಸಭೆ ಹಾಗೂ ನಗರಸಭೆಗಳಲ್ಲಿ ಪ್ರಕಟಿಸಲಾಗಿದೆ. ಈ ಕಚೇರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಶಿವಯೋಗಿ ಕಳಸದ ಮನವಿ ಮಾಡಿಕೊಂಡಿದ್ದಾರೆ.
ಮಾ. 2ರಂದು ಬಿಜಾಪುರಕ್ಕೆ ಶಾಲಿನಿ ರಜನೀಶ
ಬಿಜಾಪುರ: ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ ಮಾ. 2ರಂದು ಬಿಜಾಪುರಕ್ಕೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ ಧಾರವಾಡದಿಂದ ಸಂಜೆ 4 ಗಂಟೆಗೆ ಸಕಾಲ ಯೋಜನೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಮಾ.3 ರಂದು ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ 4ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.