'ರಾಜ್ಯದ ಹಿತ ಕಾಪಾಡುವಲ್ಲಿ ಸರ್ಕಾರ ವಿಫಲ'
ಬಿಜಾಪುರ: ರಾಜ್ಯದ ಬಿಜೆಪಿ ಸರ್ಕಾರ ಹಲವು ಹಗರಣದಲ್ಲಿ ಸಿಲುಕಿದ್ದರಿಂದ ರಾಜ್ಯದ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ನೂತನ ಕಚೇರಿಗೆ ಈಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಭ್ರಷ್ಟಾಚಾರ, ಗುಂಪುಗಾರಿಕೆಯಲ್ಲೇ ಕಾಲಹರಣ ಮಾಡುತ್ತ ಬಂದಿದೆ. ಇದರಿಂದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದರು. ಇದೇ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ, ಮಾಜಿ ಶಾಸಕ ಎಚ್.ವೈ. ಮೇಟಿ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಸುಣಗಾರ, ಪ್ರಕಾಶ ರಾಠೋಡ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಹಾದೇವಿ ಗೋಕಾಕ, ವೈಜನಾಥ ಕರ್ಪೂರಮಠ, ಚಾಂದಸಾಬ ಗಡಗಲಾವ, ಎನ್.ಆರ್. ಪಂಚಾಳ, ವಸಂತ ಹೊನಮೋಡೆ, ಈರಪ್ಪ ಜಕ್ಕಣ್ಣವರ, ಸುಭಾಸ ಕಾಲೇಭಾಗ, ದಾವಲಸಾಬ ಬಾಗವಾನ, ಸುಭಾಸ ತಳಕೇರಿ, ಅಪ್ಪು ನಾವಿ, ಬಡೆಪೀರ ಜುನೈದಿ, ಆಝಾದ ಪಟೇಲ, ಮಲ್ಲಣ್ಣ ಸಾಲಿ, ಸುಭಾಸ :ಸಾಯಾಗೋಳ, ಎಸ್.ಎಂ. ಪಾಟೀಲ, ರಾಜು ಕೂಚಬಾಳ, ಗುರಪ್ಪ ಪೂಜಾರಿ, ಎಂ.ಎಂ. ನಾಯ್ಕೋಡಿ, ಗುಲಾಬ ಚವ್ಹಾಣ, ಮಂಜುಳಾ ಗಾಯಕವಾಡ, ಗಂಗೂಬಾಯಿ ಧುಮಾಳೆ, ಜಯಶ್ರೀ ಶಿವಣಗಿ, ಭಾರತಿ ನಾವಿ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.