ವಿವಿಧ ಬೇಡಿಕೆಗೆ ಆಗ್ರಹಿಸಿ ಗ್ರಾಪಂ ನೌಕರರ ಮನವಿ
ಬಿಜಾಪುರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ರು. 10,000 ಗಳ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಜಿಲ್ಲಾ ಸಂಘದ ಪದಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅಮರೇಶ ನಾಯಕ ಅವರಿಗೆ ಈಚೆಗೆ ಮನವಿ ಅರ್ಪಿಸಿದ್ದಾರೆ.
ಗ್ರಾಮ ಪಂಚಾಯಿತಿ ನೌಕರರ ಸಂಘ ಗೌರವಾಧ್ಯಕ್ಷ ಭೀಮಶಿ ಕಲಾದಗಿ ಅವರ ನೇತೃತ್ವದಲ್ಲಿ ನಿಯೋಗಮೊಂದು ಜಿಲ್ಲಾ ಪಂಚಾಯಿತಿ ಕಚೇರಿಗೆ ತೆರಳಿ ಈ ಕುರಿತು ಮನವಿ ಸಲ್ಲಿಸಿದೆ.
ಗ್ರಾಮ ಪಂಚಾಯಿತಿ ನೌಕರರ ಸಂಘ ಜಿಲ್ಲಾ ಅಧ್ಯಕ್ಷ ಎಸ್.ಎಸ್. ಜಾಲಗೇರಿ ಅವರು ಮಾತನಾಡಿ, ಗ್ರಾಮ ಪಂಚಾಯಿತಿಯ ಎಲ್ಲ ನೌಕರರನ್ನು ಕಾಯಂಗೊಳಿಸಬೇಕು. ಸಿಪಾಯಿ, ವಾಟರ್ಮನ್, ಸ್ವೀಪರ್ ಎಂದು ಸೇವೆ ಸಲ್ಲಿಸುತ್ತಿರುವವರನ್ನು ಕ್ಲಾರ್ಕ್ ಹುದ್ದೆಗೆ ಬಡ್ತಿ ನೀಡಬೇಕು. ಬಾಕಿ ವೇತನ ಕೂಡಲೇ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅಮರೇಶ ನಾಯಕ ಅವರು ಮನವಿಯನ್ನು ಸ್ವೀಕರಿಸಿ, ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಸಂಘದ ಪ್ರಧಾನ ಕಾರ್ಯದರ್ಶಿ ವೈ.ಎಸ್. ತಳವಾರ, ಎಂ.ಕೆ. ಗುಡಿಮನಿ, ಎಸ್.ವೈ. ಸೀತಿಮನಿ, ವಿಲಾಸ ಕಾಂಬಳೆ, ರಾಜು ಬನ್ನಟ್ಟಿ, ಎ.ಎಂ. ತಮದಡ್ಡಿ, ಶ್ರೀಶೈಲ ಐನಾಪುರ, ಜಿ.ಎಸ್. ಪಾಟೀಲ, ಬಿ.ಬಿ. ಪಾಟೀಲ, ಎಸ್.ಬಿ. ಗಂಗಶೆಟ್ಟಿ, ರಾಜು ಜಾಧವ, ರಂಗಪ್ಪ ದಳವಾಯಿ ಮುಂತಾದವರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.