ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಿಜಾಪುರ

ಇಂದು ವಿದ್ಯುತ್ ವ್ಯತ್ಯಯ

Parashurama
Updated On : 15 Feb 2013, 1:31 am

ಸಿಂದಗಿ:  ತಾಲೂಕಿನಲ್ಲಿ ನಿರಂತರ ಜ್ಯೋತಿ ಕಾಮಗಾರಿ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಸಿಂದಗಿ ಪಟ್ಟಣದ ವಿದ್ಯಾನಗರ, ಜ್ಯೋತಿನಗರ, ಕಲ್ಯಾಣ ನಗರ, ಬಂದಾಳ ಈ ಭಾಗಗಳಲ್ಲಿ ಫೆ. 15ರಂದು ಬೆಳಗ್ಗೆ 11ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯ ವಾಗಲಿದೆ ಎಂದು ಹೆಸ್ಕಾಂ ಕಾರ್ಯನಿರ್ವಾಹಕ ಅಧಿಕಾರಿ ಬಿರಾದಾರ ತಿಳಿಸಿದ್ದಾರೆ.
ಇಂದು ತಾಪಂ ಸಭೆ
ಬಸವನಬಾಗೇವಾಡಿ:  ಬಸವನ ಬಾಗೇವಾಡಿ ತಾಲೂಕು ಪಂಚಾಯಿತಿ 14ನೇ ಸಾಮಾನ್ಯ ಸಭೆ ಫೆ. 15ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಸಭೆಗೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಾಗಬೇಕೆಂದು ತಾಪಂ ಅಧಿಕಾರಿ ತೊರವಿ ತಿಳಿಸಿದ್ದಾರೆ.
ಇಂದು ಪ್ರತಿಭಟನೆ
ಇಂಡಿ:  ಲಚ್ಯಾಣ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ಪೊರೈಸಬೇಕು ಎಂದು ಆಗ್ರಹಿಸಿ ಲಚ್ಯಾಣ, ಪಡನೂರ,ಬರಗುಡಿ, ಲೋಣಿ ಕೆಡಿ, ಅಹಿರಸಂಗ, ಆಳೂರ, ಮಾವಿನಹಳ್ಳಿ ಗ್ರಾಮಗಳ ಗ್ರಾಮಸ್ಥರು ಫೆ. 15 ರಂದು ಬೆಳಿಗ್ಗೆ 10 ಗಂಟೆಗೆ ಲಚ್ಯಾಣ 110 ವಿದ್ಯುತ್ ವಿತರಣಾ ಕೇಂದ್ರದ ಎದುರು ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ಈ ಗ್ರಾಮಗಳಿಗೆ ಪ್ರತಿನಿತ್ಯ ರಾತ್ರಿ 8 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಹಾಗೂ ನಸುಕಿನ ಜಾವ 4 ಗಂಟೆಯಿಂದ  ಬೆಳಗಿನವರೆಗೆ ವಿದ್ಯುತ್ ಇರುವುದಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ. ಪರೀಕ್ಷೆ ಸಮೀಪ ಇರುವುದರಿಂದ ಅಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಇದನ್ನು ಸರಪಡಿಸಲು ಸಾಕಷ್ಟುಸಲ ಅಧಿಕಾರಿಗಳಿಗೆ ಹೇಳಿದರೂ ಪ್ರಯೋಜನವಾಗಿರುವುದಿಲ್ಲ ಎಂದು ಗ್ರಾಪಂ ಅಧ್ಯಕ್ಷ ಎ.ಜೆ. ಪಾಟೀಲ, ಎ.ಬಿ. ಕರಾಳೆ, ವಿ.ಎಸ್. ಬಾಬಳಗಾಂವ, ಆರ್.ಎ.ಧಾಯಗೋಡೆ ತಿಳಿಸಿದ್ದಾರೆ.
ವ್ಯಕ್ತಿಯ ಶವ ಪತ್ತೆ
ಇಂಡಿ:  ತಾಲೂಕಿನ ಅಂಜುಟಗಿ ಗ್ರಾಮದ ಮಿಸಾಳೆ ವಸತಿ ಸಮೀಪ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ. ವ್ಯಕ್ತಿ ವಿವರ ತಿಳಿದು ಬಂದಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments