ಬಿಜಾಪುರ

ನಾಳೆ ಯುವಜನ ಮೇಳ

ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದಲ್ಲಿ ಜ.24ರಂದು ಜಿಲ್ಲಾ ಯುವಜನ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಅರವಿಂದ ಜಮಖಂಡಿ ಹೇಳಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಾನಪದ ಕಲೆ ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿ ಎಂದರು.
ತಾಲೂಕು ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ. ಜಗದೀಶ ಮಠ ಮಾತನಾಡಿ, ಜಿಲ್ಲಾ ಪಂಚಾಯಿತಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ತಾಲೂಕು ಆಡಳಿತ, ತಾಲೂಕು ಯುವ ಸಂಘಗಳ ಒಕ್ಕೂಟ ಹಾಗೂ ಓಂ ಶ್ರೀ ಗ್ರಾಮೀಣಾಭಿವೃದ್ಧಿ ಯುವಕ ಸಂಘದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಭಾಗವಹಿಸಲಿದ್ದಾರೆ ಎಂದರು.
ಮೇಳದಲ್ಲಿ ಜನಪದ ಕಲೆ, ಸಂಸ್ಕೃತಿ ಬಿಂಬಿಸುವ ಗೀಗೀ ಪದ, ರಂಗ ಗೀತೆ, ಸಣ್ಣಾಟ ಸೇರಿದಂತೆ ನಾನಾ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.ಹೆಚ್ಚಿನ ಮಾಹಿತಿಗೆ 7411765451, 8105831658, 9686220658 ಸಂಖ್ಯೆಗೆ ಸಂಪರ್ಕಿಸಿ ಪಡೆಯಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

CJP ಯ 'ತಿರಂಗಾ ಮೆರವಣಿಗೆ: 6,000 ಪೊಲೀಸರು, 220 ಸಿಎಪಿಎಫ್ ತುಕಡಿಗಳ ನಿಯೋಜನೆ, ಸಿಸಿಟಿವಿ ಕಣ್ಗಾವಲು!

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ