ಬಿಜಾಪುರ

ತಾಪಂ ಸಭೆಗೆ ಅಧಿಕಾರಿಗಳ ಗೈರು: ಆಕ್ರೋಶ

ಇಂಡಿ: ಇಲ್ಲಿನ ತಾಲೂಕು ಪಂಚಾಯಿತಿ 8ನೇ ಸಾಮಾನ್ಯ ಸಭೆ ಗುರುವಾರ ತಾಪಂ ಅಧ್ಯಕ್ಷ ಆನಂದ ಹೊಟಗಾರ ಅಧ್ಯಕ್ಷತೆಯಲ್ಲಿ ಜರುಗಿತು.
  ಸಭೆಯಲ್ಲಿ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಮೇಲಧಿಕಾರಿಗಳಿಗೆ ಶಿಫಾರಸ್ಸು ಮಾಡುವ ನಿರ್ಣಯ ಕೈಗೊಳ್ಳಲಾಯಿತು.
ಇದೇ ಸಂದರ್ಭದಲ್ಲಿ ಸದಸ್ಯರಾದ ಸವಿತಾ ಜತ್ತಿ, ರಾಜೇಂದ್ರ ಬೊಮ್ಮನಳ್ಳಿ ಮತ್ತು ಬೌರಮ್ಮ ಮುಳಜಿ ಅವರು, ಸಭೆಯಲ್ಲಿ ಇಲಾಖೆ ಮುಖ್ಯಸ್ಥರ ಬದಲಾಗಿ ಸಹಾಯಕ ಅಧಿಕಾರಿಗಳು ಹಾಜರಿದ್ದು ಅವರನ್ನು ಸಭೆಯಿಂದ ಹೊರಹಾಕಬೇಕು ಎಂದು ಒತ್ತಾಯಿಸಿದರು.
ಸದಸ್ಯ ರಾಜೇಂದ್ರ ಬೊಮ್ಮನಹಳ್ಳಿ ಅವರು, ತಾಪಂ ಯೋಜನೆ ಅನುಷ್ಠಾನಗೊಳಿಸುವಲ್ಲಿ ತಾಪಂ ಎಂಜಿನಿಯರ್ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ  ಎಂದು ಆರೋಪಿಸಿದರು.
ಹತ್ತಳ್ಳಿ ಗ್ರಾಮಕ್ಕೆ ಪೈಪಲೈನ್ ಮೂಲಕ ಕುಡಿವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸದಸ್ಯ ಸೂರ್ಯಕಾಂತ ಮಠಪತಿ ಮನವಿ ಮಾಡಿದರು.
 ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಜಯರಾಮ ಚವ್ಹಾಣ, ಉಪಾಧ್ಯಕ್ಷೆ ಸರೂಬಾಯಿ ಆಸಂಗಿ, ಜಿಲ್ಲಾ ಪಂಚಾಯಿತಿ  ಸದಸ್ಯ ಗುರಣ್ಣಗೌಡ ಪಾಟೀಲ, ರಾಮ ಅವಟಿ, ಚಂದ್ರಶೇಖರ ನಿರಾಳೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!