ಆಲಮಟ್ಟಿ ನೀರು ಸೊಲ್ಲಾಪುರಕ್ಕೆ ಬಿಡಲ್ಲ: ಬೆಳ್ಳುಬ್ಬಿ
ಬಿಜಾಪುರ: ಆಲಮಟ್ಟಿ ಅಣೆಕಟ್ಟೆಯಿಂದ ಸೊಲ್ಲಾಪುರಕ್ಕೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಎಪಿಎಂಸಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಸ್ಪಷ್ಟಪಡಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸೊಲ್ಲಾಪುರದಲ್ಲಿ ಜನರಿಗೆ ಕುಡಿಯುವ ನೀರಿನ ತೀವ್ರ ತೊಂದರೆ ಎದುರಾದ ಹಿನ್ನೆಲೆಯಲ್ಲಿ ಆಲಮಟ್ಟಿ ಅಣೆಕಟ್ಟೆಯಿಂದ ನೀರು ಪಡೆಯಲು ಯತ್ನಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಯೋಚಿಸುತ್ತಿದೆ ಎಂಬ ವರದಿ ಮಹಾರಾಷ್ಟ್ರದ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಬಗ್ಗೆ ಗಮನ ಸೆಳೆದಾಗ ಅವರು ಮೇಲಿನಂತೆ ಉತ್ತರಿಸಿದರು.
ಆಲಮಟ್ಟಿ ಅಣೆಕಟ್ಟೆಯಲ್ಲಿಯೇ ನೀರಿನ ಕೊರತೆಯಿದೆ. ಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿಯೇ ಜನರು ಕುಡಿಯುವ ನೀರಿಗಾಗಿ ತೊಂದರೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಸೊಲ್ಲಾಪುರಕ್ಕೆ ನೀರು ಪೂರೈಸುವ ವಿಚಾರವಿಲ್ಲ. ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕಾಡುವ ನೀರಿನ ಕೊರತೆ ನೀಗಿಸಲು ಮಹಾರಾಷ್ಟ್ರಕ್ಕೆ ದುಡ್ಡು ನೀಡಿ ಕೊಯ್ನಾ ಅಣೆಕಟ್ಟೆಯಿಂದ ನೀರು ಪಡೆಯಲಾಗುವುದು ಎಂದೂ ಅವರು ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.