ಸಮ್ಮೇಳನಕ್ಕೆ 45 ಕಲಾ ತಂಡ
ಬಿಜಾಪುರ: ನಗರದಲ್ಲಿ ಫೆ.9ರಿಂದ ಮೂರು ದಿನಗಳ ಕಾಲ ಜರುಗಲಿರುವ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಯಲ್ಲಿ 45 ಕಲಾ ತಂಡಗಳು ಭಾಗವಹಿಸಲಿವೆ ಎಂದು ಇಂಡಿಯನ್ ರಿಸರ್ವ್ ಬಟಾಲಿಯನ್ ಕಮಾಂಡೆಂಟ್ ಹಾಗೂ ಮೆರವಣಿಗೆ ಸಮಿತಿ ಅಧ್ಯಕ್ಷ ಕೆ.ಎಂ. ಗಂಗಾಧರಪ್ಪ ತಿಳಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜಾಪುರ ಜಿಲ್ಲೆಯಿಂದ 20 ಹಾಗೂ ರಾಜ್ಯದ ವಿವಿಧೆಡೆಯಿಂದ 25 ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಮೆರವಣಿಗೆ ಅಂದು ಬೆಳಗ್ಗೆ 8 ರಿಂದ 11 ಗಂಟೆಯವರೆಗೆ ನಡೆಯಲಿದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.