ಕೃಷ್ಣಾ ಭಾಗ್ಯ ಜಲನಿಗಮ: ದಾಖಲೆ ಪರಿಶೀಲಿಸಿದ ಲೋಕಾಯುಕ್ತರು
ಬಿಜಾಪುರ: ಕೃಷ್ಣಾ ಭಾಗ್ಯ ಜಲ ನಿಗಮದಡಿಯಲ್ಲಿ ಬರುವ ಕೆರೆಗಳ ನೀರು ತುಂಬುವ ಯೋಜನೆಯಲ್ಲಿ ಅವ್ಯವಹಾರ ಹಾಗೂ ಕಳಪೆ ಕಾಮಗಾರಿ ನಡೆದಿದೆ ಎಂದು ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ್ ಸಲ್ಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಬಿಜಾಪುರ ಲೋಕಾಯುಕ್ತ ಅಧಿಕಾರಿಗಳು ಆಲಮಟ್ಟಿ, ಮಟ್ಟಿಹಾಳದ ವಿವಿಧ ಕೃಷ್ಣಾ ಭಾಗ್ಯ ಜಲ ನಿಗಮದ ಕಚೇರಿಗಳಲ್ಲಿ ಸೋಮವಾರ ಕಡತ ಪರಿಶೀಲಿಸಿದರು.
ಕೆಬಿಜೆಎನ್ಎಲ್ ವತಿಯಿಂದ ಬಿಜಾಪುರ ಹಾಗೂ ಜಮಖಂಡಿ ತಾಲೂಕಿನ ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ತುಂಬುವ ಯೋಜನೆಯ ಕಾಮಗಾರಿಯಲ್ಲಿ ವಿಳಂಬವಾಗಿದೆ. ಅಲ್ಲಿ ಕೈಗೊಳ್ಳಲಾದ ಅನೇಕ ಕಾಮಗಾರಿಗಳು ಮುಗಿಯದೇ ಹಣ ಪಾವತಿಸಲಾಗಿದೆ. ಅಲ್ಲಿ ನಡೆದಿರುವ ಕಾಮಗಾರಿ ಕಳಪೆಯಾಗಿವೆ ಎಂದು ಶಾಸಕ ಎಂ.ಬಿ. ಪಾಟೀಲ ಲೋಕಾಯುಕ್ತರಿಗೆ ದೂರು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆಗಾಗಿ ಈ ಯೋಜನೆಯ ಕಚೇರಿಗಳಾದ ಮಟ್ಟಿಹಾಳದ ಮುಳವಾಡ ಏತ ನೀರಾವರಿ ಯೋಜನೆ ಕಾರ್ಯಪಾಲಕ ಎಂಜಿನಿಯರ್ ಅವರ ವಿಭಾಗೀಯ ಕಚೇರಿ ಸಂಖ್ಯೆ-2ರಲ್ಲಿ ದಾಖಲೆಗಳನ್ನು ಪರಿಶೀಲಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.