ಬಿಜಾಪುರ

ಸಾಲ ಬಾಧೆರೈತ ಆತ್ಮಹತ್ಯೆ

ಚಡಚಣ: ಸಾಲಬಾಧೆಯಿಂದ ಬೇಸತ್ತು ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ಹತ್ತಳ್ಳಿ ಗ್ರಾಮದ ಮತ್ತೊಬ್ಬ ರೈತನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಜರುಗಿದೆ.
ಜಕ್ಕಪ್ಪ ಶಿವಪ್ಪ ಹೇರಕಾರ (38) ಆತ್ಮಹತ್ಯೆಗೆ ಶರಣಾದಾತ. 2 ತಿಂಗಳ ಹಿಂದೆ ಸುರಿದ ಆಲಿಕಲ್ಲು ಮಳೆಯಿಂದ ಮೂರೂವರೆ ಎಕರೆ ಜಮೀನಿನಲ್ಲಿ ಬೆಳೆದ ಕಬ್ಬು ಬೆಳೆ ಸಂಪೂರ್ಣ ನಾಶವಾಗಿತ್ತು. ಹೀಗಾಗಿ ಚಡಚಣ ಸಿಂಡಿಕೇಟ್ ಬ್ಯಾಂಕ್ ಶಾಖೆಯಲ್ಲಿ ಬೆಳೆಸಾಲ ಹಾಗೂ ಪೈಪ್‌ಲೈನ್‌ಗಾಗಿ ರು. 3 ಲಕ್ಷ, ಹತ್ತಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರು. 42 ಸಾವಿರ, ಕೈಗಡವಾಗಿ ಖಾಸಗಿಯವರಲ್ಲಿ ರು. 7 ಲಕ್ಷ ಸಾಲ ಮಾಡಿದ್ದ. ಹಾವಿನಾಳ ಗ್ರಾಮದ ಇಂಡಿಯನ್ ಶುಗರ್ಸ್‌ಗೆ ಸಾಗಿಸಿದ್ದ ಕಬ್ಬಿನ ಬಾಕಿ ಹಣ ಈವರೆಗೂ ಪಾವತಿಯಾಗಿರಲಿಲ್ಲ. ಇದರಿಂದ ನೊಂದು ತೋಟದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.        

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಉರಿ ಸೆಕ್ಟರ್ ನಲ್ಲಿ ಒಳನುಸುಳುವಿಕೆ ಯತ್ನ, ಪಾಕ್ ಉಗ್ರನ ಹತ್ಯೆ!

ಇರಾನ್ ವಾರ್ ಗೆ ಹೌತಿಗಳು ಸಜ್ಜು! ಮತ್ತೊಂದು ಜಲಸಂಧಿ ಬಂದ್? ಜಾಗತಿಕ ವ್ಯಾಪಾರಕ್ಕೆ ಮತ್ತಷ್ಟು ಹೊಡೆತ!

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಮೂವರು ಸಬ್ ಇನ್‌ಸ್ಪೆಕ್ಟರ್‌ ಸಾವು; ಇಬ್ಬರಿಗೆ ಗಂಭೀರ ಗಾಯ

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಚು. ಆಯೋಗದಿಂದ ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ: 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

SCROLL FOR NEXT