ಬಿಜಾಪುರ: ಎಡಿಜಿಪಿ ಡಾ. ರವೀಂದ್ರನಾಥ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಹಾಗೂ ರಾಜ್ಯದಲ್ಲಿ ದಲಿತ ಉನ್ನತಾಧಿಕಾರಿಗಳಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಜೂ.5ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಕರ್ನಾಟಕ ಸಮಿತಿ ರಾಜ್ಯ ಸಂಚಾಲಕ ಡಿ.ಜಿ. ಸಾಗರ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಡಿಜಿಪಿ ಡಾ. ರವೀಂದ್ರನಾಥ ಅವರು ಮೊಬೈಲ್‌ನಲ್ಲಿ ಯುವತಿಯೊಬ್ಬಳ ಫೋಟೋ ಸೆರೆ ಹಿಡಿದಿದ್ದಾರೆ ಎಂದು ಆರೋಪಿಸಿ ಅವರನ್ನು ಪೊಲೀಸರು ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಇದು ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದಕರ ಅವರ ಷಡ್ಯಂತ್ರ. ಡಿಸಿಪಿ ರವಿಕಾಂತಗೌಡ ಅವರೂ ಈ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆ. ರವಿಕಾಂತಗೌಡ ಅವರು ನಗರ ಪೊಲೀಸ್ ಆಯುಕ್ತ ಔರಾದಕರ ಅವರಿಗೆ ಸಾಥ್ ನೀಡಿದ್ದಾರೆ ಎಂದರು.