ಬಿಜಾಪುರ

ಬಸ್ ದರ ಏರಿಕೆ ಖಂಡಿಸಿ ಪ್ರತಿಭಟನೆ

ದೇವರಹಿಪ್ಪರಗಿ: ಬಸ್ ದರ ಏರಿಕೆ, ವಿದ್ಯುತ್ ಕಡಿತದಂತಹ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಿರ್ಧಾರ ಖಂಡಿಸಿ ಇಲ್ಲಿನ ಸಾರ್ವಜನಿಕ ಬಡವರ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಇಲ್ಲಿನ ಮೊಹರೆ ಹನುಮಂತರಾಯ ವೃತ್ತದಲ್ಲಿ ಜಮಾಯಿಸಿದ ಸಾರ್ವಜನಿಕರು, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮೆರವಣಿಗೆ ಮೂಲಕ ರಾಷ್ಟ್ರೀಯ ಹೆದ್ದಾರಿ ಮೂಲಕ ನಾಡ ಕಚೆರಿಗೆ ಆಗಮಿಸಿ ಉಪತಹಸೀಲ್ದಾರ್ ಎಂ. ಇಸ್ಮಾಯಿಲ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸಾರ್ವಜನಿಕ ಬಡವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಹಮ್ಮದ ರಫೀಕ ಮೊಮೀನ್ ಮಾತನಾಡಿ, ರಾಜ್ಯ ಸರ್ಕಾರದ ಢೋಂಗಿತನ ಈಗ ಗೊತ್ತಾಗುತ್ತಿದೆ. ಬಡವರ, ಹಿಂದುಳಿದವರ ಪರ ಸರ್ಕಾರ ಎಂದು ಬಡಾಯಿ ಕೊಚ್ಚಿಕೊಳ್ಳುತ್ತ ಬಡವರ ಜೇಬಿಗೆ ಕತ್ತರಿ ಹಾಕುತ್ತಿದೆ. ಬಸ್ ದರ ಏರಿಸಿದ ಬೆನ್ನಲ್ಲೇ ವಿದ್ಯುತ್ ಶಾಕ್ ನೀಡಿ ಗಾಯದ ಮೇಲೆ ಬರೆ ಎಳೆದಿದೆ.
ರಾಜ್ಯಪಾಲರು ತಕ್ಷಣವೇ ಮಧ್ಯ ಪ್ರವೇಶಿಸಿ ಬಸ್ ದರ ಇಳಿಸಬೇಕು. ಬಡವರಿಗೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿದ್ಯುತ್ ಒದಗಿಸಬೇಕು ಎಂದು ಆಗ್ರಹಿಸಿದ್ದರು.
ಶ್ರೀಧರ ನಾಡಗೌಡ ಮಾತನಾಡಿ, ವಿದ್ಯುತ್ ಉತ್ಪಾದನೆ ಕೊರತೆಯ ನೆಪ ಮಾಡಿಕೊಂಡು ವಿದ್ಯುತ್ ಕಡಿತಗೊಳಿಸಿರುವುದು ಯಾವ ನ್ಯಾಯ. ಇಂಧನ ಸಚಿವರು, ರಾಜ್ಯಕ್ಕೆ ವಿದ್ಯುತ್ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದರು. ಆ ಮಾತು ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ ಅವರು, ತಕ್ಷಣವೇ ಬಸ್ ದರ ಇಳಿಸಬೇಕು. ಅಗತ್ಯ ಪ್ರಮಾಣದ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎನ್.ಕೆ. ಪಟೇಲ, ನಬಿಲಾಲ ತಾಂಬೋಳಿ, ಗಂಗಾರಾಮ ಮೆಟಗಾರ, ಬಶೀರ ಅಹಮ್ಮದ ಶಹಾಪೂರ, ಬಡೇಸಾಬ ಬಿಂಜಲಬಾವಿ, ಬಂದೇನವಾಜ ಅತನೂರ, ದುಂಡಪ್ಪ ಮುಡಗೋಳ ಮತ್ತೀತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ