ಕೆರೆ ಒತ್ತುವರಿ ತೆರವುಗೊಳಿಸಿ: ಜಿಎನ್ಎನ್
ಯಳಂದೂರು: ಕೆರೆ ಒತ್ತುವರಿ ಮಾಡಿಕೊಂಡಿರುವುದನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಿ ಎಂದು ಶಾಸಕ ಜಿ.ಎನ್.ನಂಜುಂಡಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಕೊಮಾರನಪುರ ಹಾಗೂ ಆಲ್ಕೆರೆ ಅಗ್ರಹಾರ ಗ್ರಾಮದಲ್ಲಿ ಕೆರೆಗಳ ಹೂಳೆತ್ತುವ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ, ಕೆರೆಗಳಲ್ಲಿ ಹೂಳು ತುಂಬಿರುವುದರಿಂದ ನೀರು ಸಂಗ್ರಹಣೆಯಾಗಲು ಸಮಸ್ಯೆಯಿದೆ. ಅಂತರ್ಜಲ ಮಟ್ಟ ಕೂಡ ಕುಸಿಯುತ್ತಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರು ಗಣನೀಯವಾಗಿ ಇಳಿಮುಖವಾಗುತ್ತಿದೆ. ಇದರಿಂದ ರೈತರು ಫಸಲುಗಳಿಗೆ ನೀರುಣಿಸಲು ಪರದಾಡಬೇಕಾಗಿದ್ದು, ಅಂತರ್ಜಲ ಮಟ್ಟ ಹೆಚ್ಚಿಸಲು ಹೂಳು ತೆಗೆಸಲಾಗುವುದು. ಅಲ್ಲದೇ ಕೆರೆಗೆ ನೀರು ಹರಿದು ಬರುವ ಕಾಲುವೆಗಳ ಒತ್ತುವರಿ ತೆರವುಗೊಳಿಸಿ ಕೆರೆಗೆ ಚಾನಲ್ಗಳಿಂದ ನೀರು ಸುಲಭವಾಗಿ ಹರಿಯಲು ಅನುಕೂಲವಾಗುತ್ತದೆ. ಆಲ್ಕೆರೆ ಅಗ್ರಹಾರ ಕೆರೆಯನ್ನು ಕೆರೆಗಳ ಪುನಶ್ಚೇತನ ಯೋಜನೆಯಲ್ಲಿ 32 ಲಕ್ಷ ವೆಚ್ಚದಲ್ಲಿ ಅಭಿವದ್ಧಿಪಡಿಸಲಾಗುವುದು. ಅದೇ ರೀತಿ ಕೊಮಾರನಪುರದ ಕೆರೆಯನ್ನು 22 ಲಕ್ಷ ವೆಚ್ಚದಲ್ಲಿ ಕೆರೆ ಹೂಳು ತೆಗೆಸಲಾಗುವುದು ಎಂದರು.
ತಾಪಂ ಸದಸ್ಯರಾದ ವೆಂಕಟಾಚಲ, ಕೆ.ಪಿ.ಶಿವಣ್ಣ, ಗುತ್ತಿಗೆದಾರ ಕೃಷ್ಣನ್, ನೀರಾವರಿ ಇಲಾಖೆ ಎಇಇ ಶಿವಮಲ್ಲು, ಜೆಇ ಅಜರುದ್ಧೀನ್, ನಾಗೇಂದ್ರ, ಪಿಎಸ್ಐ ಚಿಕ್ಕರಾಜಶೆಟ್ಟಿ, ಮದ್ದೂರು ವಿರೂಪಾಕ್ಷ, ಮದ್ದೂರು ರಂಗಸ್ವಾಮಿ, ಮಹದೇವಶೆಟ್ಟಿ, ಚಿನ್ನಸ್ವಾಮಿ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಪುಟ್ಟಸಿದ್ದಮ್ಮ, ಯರಿಯೂರು ಈರಣ್ಣ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.