ಬೀದಿನಾಯಿ ದಾಳಿ: ಬಾಲಕನಿಗೆ ಗಾಯ
ಹನೂರು: ಬೀದಿ ನಾಯಿಗಳು ದಾಳಿ ನಡೆಸಿ ಬಾಲಕನನ್ನು ಗಾಯಗೊಳಿಸಿರುವ ಘಟನೆ ಪಟ್ಟಣದ ದೊಡ್ಡಿಕೇರಿ ಬೀದಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಲೋಕೇಶ್ ಎಂಬವರ ಮಗ ವಿಜಯ್(5) ನಾಯಿ ಕಡಿತಕ್ಕೊಳಗಾಗಿದ್ದಾನೆ. ಮನೆಯ ಮುಂಭಾಗ ಆಟವಾಡುತ್ತಿದ್ದಾಗ ಬೀದಿ ನಾಯಿಗಳು ದಾಳಿ ನಡೆಸಿ ಬಲ ತೋಳಿಗೆ ಕಚ್ಚಿ ಗಾಯಗೊಳಿಸಿವೆ. ಚಿಕಿತ್ಸೆಗಾಗಿ ಹನೂರಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ನಾಯಿ ಕಡಿತದ ಚುಚ್ಚುಮದ್ದು ಇಲ್ಲವೆಂದು ವೈದ್ಯರು ತಿಳಿಸಿದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಪಟ್ಟಣದಲ್ಲಿ ಕಳೆದ ತಿಂಗಳು ಕೂಡ ಹಲವು ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದು, ನಾಯಿಗಳು ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆ ಬದಿಗಳಲ್ಲಿ ಮಲಗಿ, ಕಚ್ಚಾಡಿಕೊಂಡು ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗೆ ಹಾಗೂ ಶಾಲೆಗೆ ಹೋಗುವ ಮಕ್ಕಳ ಮೇಲೆ ದಾಳಿ ನಡೆಸಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡು, ನಾಗರಿಕರ ರಕ್ಷಣೆಗೆ ಮುಂದಾಗಬೇಕಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.