ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಾಮರಾಜನಗರ

ಲಿಟಲ್ ಫ್ಲವರ್ ಶಾಲೆಯ ವಾರ್ಷಿಕೋತ್ಸವ

Parashurama
Updated On : 1 Feb 2013, 9:56 am

ಗುಂಡ್ಲುಪೇಟೆ: ಶಿಕ್ಷಣ ಕ್ಷೇತ್ರಕ್ಕೆ ಮಠ ಮಾನ್ಯಗಳು, ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರವಾಗಿದ್ದು, ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ದೇಶ ಹೆಚ್ಚಿನ ಪ್ರಗತಿ ಸಾಧಿಸಲು ಕಾರಣರಾಗಿದ್ದಾರೆ ಎಂದು ಶಾಸಕ ಎಚ್.ಎಸ್.ಮಹದೇವಪ್ರಸಾದ್ ಹೇಳಿದರು.
ತಾಲೂಕಿನ ಬೇಗೂರು ಲಿಟಲ್ ಫ್ಲವರ್ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳು, ಮಠ ಮಾನ್ಯಗಳು, ಕ್ರೈಸ್ತ ಮಿಷನರಿಗಳು ಶಿಕ್ಷಣಕ್ಕೆ ಉತ್ತಮ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ. ಉತ್ತಮ ಶಿಕ್ಷಣ ಕೊಡಿಸಲು ಪೋಷಕರು ಮುಂದಾಗುವಂತೆ ಮನವಿ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಮಲ್ಲಿಕಾರ್ಜುನ ಮಾತನಾಡಿ, ಲಿಟಲ್ ಫ್ಲವರ್ ಸಂಸ್ಥೆ ಇತರೆ ಖಾಸಗಿ ಸಂಸ್ಥೆಗಳಿಗೆ ಮಾದರಿಯಾಗಿದೆ. ಇಲ್ಲಿ ವ್ಯಾಸಂಗ ಮಾಡಿದ ಮಕ್ಕಳು ಉತ್ತಮ ಸಾಧನೆ ಮಾಡಿದ್ದಾರೆ ಎಂದರು.
ಫಾದರ್ ಜಾನ್ ಪನಂತೊಟ್ಟಂ, ಫಾದರ್ ಎಮ್ಮನೆಲ್  ಅಯಂಕುಡಿ, ಜಾನ್ ಮನ್ನರತಾರ ಮಾತನಾಡಿದರು. ಜಿಪಂ ಸದಸ್ಯ ಡಿ.ಸಿ.ನಾಗೇಂದ್ರ, ಗ್ರಾಪಂ ಅಧ್ಯಕ್ಷೆ ಗೌರಮ್ಮ, ಗ್ರಾಪಂ ಸದಸ್ಯರಾದ ನಾಗಮ್ಮ, ರಾಜಶೆಟ್ಟಿ, ರಮೇಶ್, ಅಶೋಕ್ ಇದ್ದರು.
ಶಾಲೆಯ ನಿರ್ದೇಶಕ ಮ್ಯಾಥ್ಯು ಮನಿಚ್ಕತಾಜ್ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಸುಬ್ರಮಣ್ಯಸ್ವಾಮಿ ವಾರ್ಷಿಕ  ವರದಿ ಮಂಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments