ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಾಮರಾಜನಗರ

ಆದರ್ಶಗಳಷ್ಟೇ ಸಾಧನೆಯೂ ಮುಖ್ಯ: ನಾಗಶ್ರೀ

Parashurama
Updated On : 17 Feb 2013, 12:24 pm

ಚಾಮರಾಜನಗರ: ಜೀವನದಲ್ಲಿ ಮಹಾತ್ಮರ ಆದರ್ಶಗಳನ್ನು ಅಳವಡಿಸಿಕೊಂಡು, ಸಮಾಜದಲ್ಲಿ ತಮ್ಮದೇ ಆದ ವಿಶೇಷ ಸಾಧನೆ ಮಾಡಿದಾಗ, ದೇಶದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಜಿಪಂ ಅಧ್ಯಕ್ಷೆ ನಾಗಶ್ರೀ ಪ್ರತಾಪ್ ತಿಳಿಸಿದರು.
ಅವರು ನಗರದ ಜಿಲ್ಲಾಡಳಿತ ಭವನದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಗರದ ವಿವೇಕ ಗೆಳೆಯರ ಬಳಗ ಹಾಗೂ ಸ್ನೇಹ ವಿಕಾಸ ವೇದಿಕೆ ಸಹಭಾಗಿತ್ವದಲ್ಲಿ ನಡೆದ ವಾಣಿಜ್ಯ ವಿದ್ಯಾರ್ಥಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಪಂಚದಲ್ಲೇ ಹೆಚ್ಚು ಯುವಶಕ್ತಿ ಹೊಂದಿರುವ ಭಾರತದ ಯುವಶಕ್ತಿಗೆ ಒಳ್ಳೆಯ ಮಾರ್ಗದರ್ಶನದ ಅವಶ್ಯಕತೆ ಇದೆ. ಯುವಶಕ್ತಿ ಸಂಘಟನೆಯಾಗಬೇಕು ಎಂದರು.
ಮುಖ್ಯ ಅತಿಥಿಗಳಾಗಿದ್ದ ಬಿಎಸ್ವಿ ಪ್ರತಿಷ್ಠಾನದ ವೆಂಕಟನಾಗಪ್ಪ ಶೆಟ್ಟಿ ಮಾತನಾಡಿ, ಒಳ್ಳೆ ಅವಕಾಶಗಳು ಜೀವನವನ್ನೇ ಬದಲಾಯಿಸಿ ಬಿಡುತ್ತವೆ. ಸದೃಢ ಭಾರತ ಕಟ್ಟುವಲ್ಲಿ ಯುವಶಕ್ತಿಯ ಪಾತ್ರ ಮಹತ್ತರವಾಗಿರುವುದರಿಂದ ವಿದ್ಯಾರ್ಥಿ ಜೀವನದಲ್ಲಿ ಬರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.
ರಾಜ್ಯ ಹಾಗೂ ರಾಷ್ಟ್ರ ಯುವ ಪ್ರಶಸ್ತಿ ವಿಜೇತ ಸುರೇಶ್ ಎನ್. ಋಗ್ವೇದಿ ಮಾತನಾಡಿ, 60 ಕೋಟಿಯಷ್ಟು ಯುವ ಶಕ್ತಿಯನ್ನು ಹೊಂದಿರುವ ಭಾರತದ ಯುವಕರಿಗೆ ಆತ್ಮವಿಶ್ವಾಸವನ್ನು ತುಂಬುವ, ಚಿಂತನೆಗಳನ್ನು ಮೂಡಿಸುವ ಕಾರ್ಯಕ್ರಮಗಳು ಹೆಚ್ಚು ಅವಶ್ಯಕ ಎಂದರು.
ಅಧ್ಯಕ್ಷತೆಯನ್ನು ಮಾಜಿ ನಗರಸಭಾ ಅಧ್ಯಕ್ಷ ಎಂ. ರಾಮಚಂದ್ರ ವಹಿಸಿದ್ದರು. ಪ್ರಾಚಾರ್ಯ ಪ್ರೊ. ಬಿ.ಎಂ. ರಾಮದಾಸ್ ಹಾಗೂ ಬೆಂಗಳೂರಿನ ರಾಷ್ಟ್ರ ಗೌರವ ಸಂರಕ್ಷಣಾ ಪರಿಷತ್ತಿನ ಅಧ್ಯಕ್ಷ ಟಿ.ಎನ್. ರಾಮಕೃಷ್ಣ ಸಂಪನ್ನೂಲ ವ್ಯಕ್ತಿಗಳಾಗಿ ಅಗಮಿಸಿ ವಾಣಿಜ್ಯ ಶಾಸ್ತ್ರದ ಅಧ್ಯಯನದ ಅವಶ್ಯಕತೆಗಳು ಹಾಗೂ ಅವಕಾಶಗಳ ಬಗ್ಗೆ ತಿಳಿಸಿದರು. ಬಳಗದ ಗೌರವಾಧ್ಯಕ್ಷ ಸುನಿಲ್ ಕುಮಾರ್ ನಿರೂಪಿಸಿ, ಅಧ್ಯಕ್ಷ ಪ್ರಶಾಂತ್ ಪ್ರಾಸ್ತಾವಿಕ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement