ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಾಮರಾಜನಗರ

ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಿ

Parashurama
Updated On : 17 Feb 2013, 12:23 pm

ಯಳಂದೂರು: ಪ್ರತಿಯೊಬ್ಬ ಪೋಷಕರು ತಮ್ಮ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಶಾಸಕ ಜಿ.ಎನ್.ನಂಜುಂಡಸ್ವಾಮಿ ಹೇಳಿದರು.
ಅವರು ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಡಿಪಿ ಯೋಜನೆಯಡಿ ಬಿಡುಗಡೆಯಾದ 14.85 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಹೆಚ್ಚುವರಿ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿ, ಹೆಣ್ಣು ಅಡುಗೆ ಮನೆಗೆ ಸೀಮಿತವಾಗದೆ, ಅವಳು ಎಲ್ಲ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡಬೇಕು ಎಂಬ ಉದ್ದೇಶದಿಂದ ಮಹಿಳೆಯರ ಶಿಕ್ಷಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಆದರೆ ಗ್ರಾಮಾಂತರ ಪ್ರದೇಶಗಳ ಕೆಲವೆಡೆ ಇನ್ನೂ ಮೂಢನಂಬಿಕೆಗಳು ಹೆಚ್ಚಾಗಿದ್ದು, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಮಾನ್ಯತೆ ಸಿಗುತ್ತಿಲ್ಲ. ಇದರಿಂದ ಸಾಕ್ಷರತೆಯ ಪ್ರಮಾಣದಲ್ಲಿ ಹೆಣ್ಣು ಹಾಗೂ ಗಂಡಿನ ಶೇಕಡಾವಾರು ಫಲಿತಾಂಶದಲ್ಲಿ ಸದಾ ಅಂತರ ಕಾಣುತ್ತಿದ್ದೇವೆ. ಈ ನಿಟ್ಟಿನಲ್ಲಿ ಇನ್ನು ಮುಂದಾದರೂ ಪ್ರತಿಯೊಬ್ಬ ಪೋಷಕರೂ ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಆಗ ಮಾತ್ರ ದೇಶ ಅಭಿವೃಧ್ಧಿ ಪಥದತ್ತ ಮುನ್ನುಗ್ಗಲು ಸಾಧ್ಯ ಎಂದರು.
ಜಿಪಂ ಉಪಾಧ್ಯಕ್ಷ ರಾಮಚಂದ್ರ, ಸದಸ್ಯರಾದ ಕೇತಮ್ಮ, ಸಿದ್ದರಾಜು, ತಾಪಂ ಅಧ್ಯಕ್ಷೆ ಗಂಗಾಮಣಿ ರೇವಣ್ಣ, ವಿಜಯಲಕ್ಷ್ಮಿ ನಂಜುಂಡ, ನಾಗೇಶ, ಕೆ.ಪಿ.ಶಿವಣ್ಣ, ವೆಂಕಟಾಚಲ, ಪಪಂ ಅಧ್ಯಕ್ಷ ರಂಗಸ್ವಾಮಿ, ಮದ್ದೂರು ವಿರೂಪಾಕ್ಷ, ರಾಜೇಂದ್ರ, ಬಿಇಒ ಮಂಜುನಾಥ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement