ಚಾಮರಾಜನಗರ

ಮನಸೂರೆಗೊಂಡ ಸಾಮೂಹಿಕ ಸೂರ್ಯ ನಮನ

ಚಾಮರಾಜನಗರ: ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅತ್ಯಂತ ಅವಶ್ಯಕ ಎಂದು ನ್ಯಾಯಮೂರ್ತಿ ಕೆ.ಎಚ್.ಮಲ್ಲಪ್ಪ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಯೋಗ ಒಕ್ಕೂಟದ ವತಿಯಿಂದ, ರಥಸಪ್ತಮಿ ಹಾಗೂ ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ನಡೆದ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಾಚೀನ ಭಾರತೀಯ ಸಂಸ್ಕೃತಿಯಲ್ಲಿ ಯೋಗಕ್ಕೆ ಮಹತ್ತರ ಸ್ಥಾನವಿದ್ದು, ಯೋಗ ಮನುಷ್ಯರ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಅವರನ್ನು ಸಂಯಮಶೀಲರನ್ನಾಗಿ ಮಾಡುತ್ತದೆ. ಇದರಿಂದ ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗದಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಲು ಸಹಕಾರಿಯಾಗುತ್ತದೆ ಎಂದರು.
ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನಾಚರಣೆ ಹಾಗೂ ರಥಸಪ್ತಮಿ ಅಂಗವಾಗಿ ಜಿಲ್ಲಾ ಯೋಗ ಒಕ್ಕೂಟದ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅರ್ಥಪೂರ್ಣ. ಇದು ನಿರಂತರವಾಗಿ ನಡೆಯಬೇಕಿದೆ. ಇದರಿಂದ ಸದೃಢ ಭಾರತ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಚಂದ್ರಕಾಂತ್ ಭಜಂತ್ರಿ ಮಾತನಾಡಿ, ಯೋಗವು ಮಾನವನ ಆರೋಗ್ಯ ಕಾಪಾಡುವ ಜೊತೆಗೆ ಜ್ಞಾನವನ್ನು ಗ್ರಹಿಸುವ ಶಕ್ತಿ ಹೆಚ್ಚಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಇದು ನಿರಂತರವಾಗಿ ನಡೆಯಬೇಕು. ಇಂಥ ಕಾರ್ಯಕ್ರಮಗಳು ಜನರಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಿವೆ ಎಂದರು.
ಕಾರ್ಯಕ್ರಮದಲ್ಲಿ  ಭಾಗವಹಿಸಿದ್ದ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಅಧ್ಯಕ್ಷ ಎಚ್.ಜಿ.ಕುಮಾರಸ್ವಾಮಿ ಮಾತನಾಡಿ, ಪತಂಜಲಿ ಯೋಗ ಶಿಕ್ಷಣದ ವತಿಯಿಂದ ಜಿಲ್ಲೆಯಲ್ಲಿ ಉಚಿತ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ಬಗ್ಗೆ ತರಬೇತಿ ಶಿಬಿರ ನಡೆಸಲಾಗುತ್ತಿದ್ದು, ಮುಂದಿನ ದಿನಗಳಲ್ಲೂ ಇದನ್ನು ಮುಂದುವರಿಸಿಕೊಂಡು ಹೋಗಲಾಗುತ್ತದೆ ಎಂದರು.
ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ನಗರದ ಎಲ್ಲ ಶಾಲೆಗಳಿಂದ 800 ಮಕ್ಕಳು ಭಾಗವಹಿಸಿದ್ದು, 108 ಸೂರ್ಯ ನಮಸ್ಕಾರ ಮಾಡಿದರು.
ಜಿಲ್ಲಾ ಯೋಗ ಒಕ್ಕೂಟದ ಎಚ್.ಎಸ್. ಪಶುಪತಿ, ಸೇವಾ ಭಾರತಿ ಶಿಕ್ಷಣ ಸಂಸ್ಥೆಯ ಸುಬ್ರಹ್ಮಣ್ಯಂ, ಪ್ರಕಾಶ್,  ಹೊನ್ನಪ್ಪ, ನಿಜಗುಣ ಗುರುಸ್ವಾಮಿ, ಜಿಲ್ಲಾ ಯೋಗ ಒಕ್ಕೂಟದ ಕಾರ್ಯಾಧ್ಯಕ್ಷ ಬಿ.ಪಿ. ಪ್ರಕಾಶ್, ವಿಎಚ್‌ಪಿ ಶಾಲೆಯ ಮುಖ್ಯೋಪಾಧ್ಯಾಯ ಶ್ರೀನಿವಾಸ್ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್