ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಾಮರಾಜನಗರ

ಸಭೆ ಸಮಾರಂಭದಲ್ಲಿ ಕಾಂಗ್ರೆಸ್ ಕಾಲಹರಣ

Parashurama
Updated On : 27 Feb 2013, 11:40 am

ಹನೂರು: ಕಾಂಗ್ರೆಸ್‌ನೋರು ಕೇವಲ ಸಭೆ ಸಮಾರಂಭಗಳಲ್ಲೇ ಕಾಲಹರಣ ಮಾಡಿ ಪಟ್ಟಣದ ಅಭಿವೃದ್ಧಿಯನ್ನು ನಿರ್ಲಕ್ಷಿಸಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಎಂ.ಮಹದೇವ್ ಆರೋಪಿಸಿದರು.
ಪಪಂ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ಮಂಗಳವಾರ ಹನೂರಿಗೆ ಆಗಮಿಸಿ, ಬೆಟ್ಟಳ್ಳಿ ಮಾರಮ್ಮನ ಛತ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನತೆಗೆ ಕುಡಿಯುವ ನೀರು ನೀಡಲು ಇಂದಿನ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಹಿಂದುಳಿದ ಪರಿಶಿಷ್ಟ ಪಂಗಡಗಳ ಹಣವನ್ನು ಸದ್ಬಳಕೆ ಮಾಡಿಲ್ಲ. ಪೌರ ಕಾರ್ಮಿಕರಿಗೆ ಮನೆ ನಿರ್ಮಿಸಿಕೊಟ್ಟಿಲ್ಲ. ಜಿಲ್ಲೆಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಜನತೆಗೆ ನೀಡಿರುವ ಕೊಡುಗೆ ಏನು?  ಚುನಾವಣೆ ಬಂದಾಗ ಮಾತ್ರ ಎಲ್ಲ ವರ್ಗದವರ ಜನತೆಯ ನೆನಪು ಬರುತ್ತದೆ ಎಂದು ವ್ಯಂಗ್ಯವಾಡಿದರು.  
ಪಟ್ಟಣದ 13 ವಾರ್ಡ್‌ಗಳ ಪೈಕಿ 11ರಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದು ಈ ಬಾರಿ ಪಕ್ಷ ಅಧಿಕಾರ ಹಿಡಿಯಲಿದೆ. ಕಾಂಗ್ರೆಸ್ ಮತ್ತು ಕೆಜೆಪಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಆಮಿಷ ಬೆದರಿಕೆಗಳನ್ನು ಒಡ್ಡುತ್ತಿದ್ದು, ಅವರಿಗೆ ಈ ಬಾರಿ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ರಾಜ್ಯ ಉಪಾಧ್ಯಕ್ಷ ಇರ್ಷಾದ್ ಪಾಷಾ, ವಿಷ್ಣುಕುಮಾರ್, ಶಿವಮೂರ್ತಿ, ಹನೂರು ಘಟಕದ ಅಧ್ಯಕ್ಷ  ರಾಜಶೇಖರ ಮೂರ್ತಿ, ಜಿಲ್ಲಾ ಸಂಘಟನಾ ಕಾರ್ಯದರ್ಸಿ ಇದಾಯಿತ್‌ಖಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಕಾಶ್‌ಬಾಬು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement