ವಾದ್ವಾ ವರದಿ ಪರಿಶೀಲನೆಗೆ ಆಗ್ರಹ
ಚಾಮರಾಜನಗರ: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ವಾಧ್ವಾ ಸಮಿತಿಯ ವರದಿ ಪರಿಶೀಲನೆಗೆ ಆಗ್ರಹಿಸಿ ತಾಲೂಕು ಪಡಿತರ ವಿತರಕರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆ ತಹಶೀಲ್ದಾರ್ ಎಂ. ಆರ್. ಕಾಂತಮಣಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಸಂಘದ ಅಧ್ಯಕ್ಷ ವೈ.ಎಂ. ಮುರುಗೇಂದ್ರಸ್ವಾಮಿ, ವರದಿ ವಿರೋಧಿಸಿ ಸಾಕೇತಿಕವಾಗಿ ಜಿಲ್ಲೆಯ ಹಾಗೂ ತಾಲೂಕಿನ ಎಲ್ಲ ನ್ಯಾಯಬೆಲೆ ಅಂಗಡಿ ಮಾಲೀಕರು ಅಂಗಡಿಗಳನ್ನು ಬಂದ್ ಮಾಡಿದ್ದೇವೆ. ಈ ಸಂಬಂಧ ವರದಿಯನ್ನು ಪರಿಶೀಲನೆ ಮಾಡಿ ನಮಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಮಾ.13ರಂದು ರಾಷ್ಟ್ರೀಯ ಪಡಿತರ ವಿತರಕರ ಸಂಘದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಪಡಿತರ ವಿತರಕರ ಸಂಘದ ರಾಜ್ಯ ಉಪಾಧ್ಯಕ್ಷ ದುಂಡಯ್ಯ ಮಾತನಾಡಿ, ಪ್ರಧಾನಮಂತ್ರಿ ಮಧ್ಯ ಪ್ರವೇಶಿಸಿ ವಾದ್ವಾ ವರದಿಯನ್ನು ಪುನರ್ ಪರಿಶೀಲಿಸಿ ನಮಗೆ ನ್ಯಾಯ ಒದಗಿಸಿಕೊಡಬೇಕೆಂದು ಮನವಿ ಮಾಡಿದರು.
ಪ್ರಧಾನ ಕಾರ್ಯದರ್ಶಿ ಎಂ. ಶಿವಣ್ಣ, ಟಿ.ಕೆ ರಂಗಯ್ಯ, ಜಿ.ಬಿ. ಬಂಕಯ್ಯ, ಮಹದೇವು, ಸೂರ್ಯಮೂರ್ತಿ, ಶಾಂತಪ್ಪ, ನಾಗೇಂದ್ರ, ದೊರೆಸ್ವಾಮಿ, ರಾಜಶೇಖರಪ್ಪ ಇದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.