ಹುಲ್ಲಿನ ಮೆದೆಗೆ ಬೆಂಕಿ: ಲಕ್ಷಾಂತರ ರು. ಹಾನಿ
ಯಳಂದೂರು: ಹುಲ್ಲಿನ ಮೆದೆಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರು. ನಷ್ಟವಾಗಿರುವ ಘಟನೆ ತಾಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಗ್ರಾಮದ ಸಿದ್ದರಾಜು, ರಂಗಸ್ವಾಮಿ, ಮಹೇಶ್ ಎಂಬವರಿಗೆ ಸೇರಿದ 3 ಹುಲ್ಲಿನ ಮೆದೆಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ನಂದಿಸುವ ಹೊತ್ತಿಗೆ ಸಾವಿರ ಹುಲ್ಲಿನ ಕಂತೆಗಳು ಬೆಂಕಿಯ ಕೆನ್ನಾಲಿಗೆ ಸುಟ್ಟು ಭಸ್ಮವಾದವು, ಅಕ್ಕ ಪಕ್ಕದಲ್ಲಿ ಇದ್ದ ಮನೆಗಳಿಗೆ ಬೆಂಕಿ ಕಿಚ್ಚು ಚಾಚುವ ಸಮಯಕ್ಕೆ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ ಮುಂದೆ ಆಗಬಹುದಾಗಿದ್ದ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.