ಚಾಮರಾಜನಗರ: ಬಂಡಿಪುರ ರಾಷ್ಟ್ರೀಯ ಹುಲಿ ರಕ್ಷಿತಾರಣ್ಯದ ಸಂರಕ್ಷಣಾಧಿಕಾರಿಯಾಗಿ ಎಚ್.ಸಿ.ಕಾಂತರಾಜು ಸೋಮವಾರ ಅಧಿಕಾರ ವಹಿಸಿಕೊಂಡರು.
ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಕುಮಾರ್ ಪಫ್ಕರ್ ಅವರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಬಡ್ತಿ ಪಡೆದು ಬೆಂಗಳೂರಿಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಬಿಆರ್ಟಿ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್ ಮೋಹನ್ರಾಜ್ ಅವರು ಪ್ರಭಾರ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಸರ್ಕಾರ ಎಚ್.ಸಿ. ಕಾಂತರಾಜು ಅವರನ್ನು ಬಂಡಿಪುರ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಶನಿವಾರ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.