ಚಾಮರಾಜನಗರ

ತಿಂಗಳಾದ್ರೂ ಕೂಲಿ 'ಖಾತ್ರಿ' ಇಲ್ಲ

ಚಾಮರಾಜನಗರ: ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದವರಿಗೆ ವಾರದೊಳಗೆ ಹಣ ಪಾವತಿ ಮಾಡಲಾಗುವುದು ಎಂದು ಅಧಿಕಾರಿಗಳು ಭಾಷಣ ಮಾಡುತ್ತಾರೆ. ಆದರೆ, ತಿಂಗಳಾದ್ರು ಕೂಲಿ ಹಣ ಬರುವುದೇ ಇಲ್ಲ. ನಿಮ್ಮ ಹೇಳಿಕೆಗಳು ಭಾಷಣಕ್ಕಷ್ಟೇ ಸೀಮಿತವೇ ಎಂದು ಬದನಗುಪ್ಪೆ ನಿವಾಸಿ ಸಿದ್ದಪ್ಪ ಎಂಬವರು ಫೋನ್ ಇನ್ ಕಾರ್ಯಕ್ರಮದಲ್ಲಿ ಪ್ರಶ್ನಿಸಿದರು.  
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಜಿಲ್ಲಾಧಿಕಾರಿ ಎನ್. ಜಯರಾಂ ಅಧ್ಯಕ್ಷತೆಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಕರೆ ಮಾಡಿದ ಸಿದ್ದಪ್ಪ, ಖಾತ್ರಿ ಯೋಜನೆಯಡಿ ಕೆಲಸ ಮಾಡಿ ಹಲವು ತಿಂಗಳು ಕಳೆದಿದ್ದರೂ ಅದನ್ನು ಪಾವತಿಸಿಲ್ಲ ಎಂದು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಹದಿನೈದು ದಿನದೊಳಗೆ ಹಣ ಪಾವತಿ ಮಾಡುವುದಾಗಿ ಭರವಸೆ ನೀಡಿದರು.
ಸುಗ್ಗಿ ಕಾಲ ಆರಂಭವಾಗಿರುವುದರಿಂದ ರಸ್ತೆಯಲ್ಲೇ ಒಕ್ಕಣೆ ಮಾಡಲಾಗುತ್ತಿದೆ. ಇದರಿಂದ ವಾಹನ ಚಾಲಕರು ಸಮಸ್ಯೆ ಎದುರಿಸಬೇಕಾಗಿದ್ದು, ಆಹಾರ ಧಾನ್ಯವೂ ಮಲಿನವಾಗುತ್ತಿದೆ. ಈ ನಿಟ್ಟಿನಲ್ಲಿ ಗ್ರಾಪಂ ವತಿಯಿಂದ ಪ್ರತಿ ಗ್ರಾಮದಲ್ಲೂ ಸರ್ಕಾರಿ ಜಾಗದಲ್ಲಿ ಒಕ್ಕಣೆ ಕಣ ನಿರ್ಮಾಣ ಮಾಡಿಕೊಡುವಂತೆ ಅರಕಲವಾಡಿಯ ಮಹೇಶ್ ಮನವಿ ಮಾಡಿದರು.
ಹನೂರು ಬಸ್ ನಿಲ್ದಾಣ ಕಾಮಗಾರಿ ಪೂರ್ಣಗೊಂಡು ಬಹಳಷ್ಟು ದಿನ ಕಳೆದಿದ್ದರೂ ಇನ್ನೂ ಉದ್ಘಾಟನೆಯಾಗಿಲ್ಲ. ಇದರಿಂದಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿದೆ. ಜೊತೆಗೆ 36ಕ್ಕೂ ಹೆಚ್ಚು ಮಳಿಗೆಗಳಿದ್ದು, ಇದರ ಆದಾಯವೂ ನಷ್ಟವಾಗುತ್ತಿದೆ. ಸಂಬಂಧಪಟ್ಟ ಗುತ್ತಿಗೆದಾರರಿಂದ ಬೇಗ ಇಲಾಖೆಗೆ ಹಸ್ತಾಂತರಿಸುವಂತೆ ಹನೂರಿನ ಮೂರ್ತಿ ನಾಯ್ಡು ಮನವಿ ಮಾಡಿದರು.
ಹನೂರಿನಿಂದ ಬಂಡಳ್ಳಿಗೆ ಹೋಗುವ ರಸ್ತೆಯಲ್ಲಿ ಹುಣಸೆ ಮರ ಕತ್ತರಿಸಿ ನಾಲ್ಕೈದು ತಿಂಗಳಾಗಿದೆ. ಆದರೆ, ಇದುವರೆಗೆ ತೆರವುಗೊಳಿಸದೆ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ಹನೂರಿನ ಪುಟ್ಟಸ್ವಾಮಿ ದೂರಿದರು.
ಚಾಮರಾಜನಗರದ ಭುಜಂಗೇಶ್ವರಿ ಬಡಾವಣೆಯಲ್ಲಿರುವ ಸಂಪಿಗೆ ರಸ್ತೆಯಲ್ಲಿ ಲಾರಿಗಳನ್ನು ನಿಲ್ಲಿಸುವುದರಿಂದ ತಿರುಗಾಡಲು ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ಲಾರಿಗಳನ್ನು ನಿಲುಗಡೆ ಮಾಡದಂತೆ ಕ್ರಮ ವಹಿಸಿ. ಶಾಲಾ ಮಕ್ಕಳನ್ನು ಆಟೋದಲ್ಲಿ ಕರೆದುಕೊಂಡು ಹೋಗುವಾಗ ನಿಯಮ ಉಲ್ಲಂಘಿಸಿ ಹೆಚ್ಚಿನ ಮಕ್ಕಳನ್ನು ತುಂಬಿಕೊಂಡು ಹೋಗಲಾಗುತ್ತಿದ್ದು, ರಸ್ತೆಯೂ ಸರಿಯಿಲ್ಲ. ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.
ಕಾಗಲವಾಡಿ ಸಿದ್ದರಾಜು ಮತ್ತು ನಿಜದನಿ ಗೋವಿಂದರಾಜು ಕರೆ ಮಾಡಿ, ಜಿಲ್ಲೆಯಲ್ಲಿ ಕಾರ್ಮಿಕರನ್ನು ಗುರುತಿಸಿ ಗುರುತಿನ ಚೀಟಿ ನೀಡುವಂತೆ, ಕಾರ್ಮಿಕ ಸಂಘಟನೆಗಳಿಗೆ ಸಭೆ ನಡೆಸಲು ನಿವೇಶನ ನೀಡುವಂತೆ ಕೇಳಿಕೊಂಡರು. ಫೋನ್ ಇನ್ ಕಾರ್ಯಕ್ರಮದಲ್ಲಿ 30 ದೂರುಗಳು ದಾಖಲಾದವು.
ಹೆಚ್ಚುವರಿ ಪೊಲೀಸ್ ಅಧಿಕಾರಿ ಕೆ.ಟಿ. ಚಂದ್ರಶೇಖರ್, ಉಪ ಕಾರ್ಯದರ್ಶಿ ಎ.ಪಿ.ಶಂಕರರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್