ಚಾಮರಾಜನಗರ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಪಟ್ಟಣ ಪೊಲೀಸ್ ಠಾಣೆ ಆರಕ್ಷಕ ಉಪನಿರೀಕ್ಷಕ ಮೋಹಿತ್ ಸಹದೇವ್ ಹೇಳಿದರು.
ಅವರು ಜೆಎಸ್‌ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ವಾರ್ಷಿಕ ಕ್ರೀಡಾಕೂಟ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೆ ಆದ್ಯತೆ ನೀಡಿದರೆ ಉನ್ನತ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಅನುಕೂಲವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಬಿ.ಮಹಾಲಿಂಗಪ್ಪ ಮಾತನಾಡಿ, ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು, ಗುರು ಹಿರಿಯರಿಗೆ ಗೌರವ ನಮನ ಹಾಗೂ ತಮ್ಮ ಸುತ್ತಮುತ್ತಲ ಪರಿಸರ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಜೆಎಸ್‌ಎಸ್ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ.ಡಿ.ಪುಷ್ಪಾವತಿ, ಕಚೇರಿ ಅಧೀಕ್ಷಕ ಚಂದ್ರಶೇಖರ್, ಉಪನ್ಯಾಸಕರಾದ ಷಣ್ಮುಖ, ರವಿಕುಮಾರ್, ಅಂಬಿಕಾ ಇದ್ದರು.