ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿ 209ರಲ್ಲಿನ ದಿಂಡಿಗಲ್- ಬೆಂಗಳೂರು ರಸ್ತೆಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಮೇಲೆ ಭಾರೀ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸತ್ತೇಗಾಲ ಸಮೀಪ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶಿಥಿಲವಾಗಿರುವುದರಿಂದ ಭಾರೀ ವಾಹನಗಳು ಬದಲಿ ಮಾರ್ಗವಾದ ಮಳವಳ್ಳಿ, ಬೆಳಕವಾಡಿ ಕ್ರಾಸ್‌ನಿಂದ ತಲಕಾಡು, ಮಾದಾಪುರ, ಕಳಿಯೂರು, ಮುಳ್ಳೂರು ಮಾರ್ಗವಾಗಿ ಕೊಳ್ಳೇಗಾಲ ಪಟ್ಟಣಕ್ಕೆ ಸಂಚರಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.